Belagavi News In Kannada | News Belgaum

ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭೇಟಿ

ಬೆಳಗಾವಿ   :  ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಸೋಮವಾರ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭೇಟಿ ನೀಡಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಗೌರವಿಸಿ ಆಶೀರ್ವಾದ ಪಡೆದರು..

 

ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಆದಾಗಿನಿಂದಲೂ ದೇಶಕ್ಕೆ ಹೊಸ ಬದಲಾವಣೆ ನಿರ್ಮಾಣವಾಗಿದೆ. ತಾವು ಆಶೀರ್ವದಿಸಿ ಮತ್ತೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲು ತಮ್ಮ ಆಶೀರ್ವಾದ ಬೇಕು. ಬೆಳಗಾವಿ ಲೋಕಸಭೆಯಿಂದ ನನ್ನಗೆ ಆಯ್ಕೆ ಮಾಡಿ ಆಶೀರ್ವದಿಸಿ ಎಂದು ಶ್ರೀಗಳಲ್ಲಿ ಮನವಿ ಮಾಡಿದರು..

 

ಈ ಸಂದರ್ಭದಲ್ಲಿ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಅಲ್ಪಸಂಖ್ಯಾತರ ನಿಗಮ ಮಂಡಳದ ಮಾಜಿ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ, ಈರಣ್ಣಾ ಕೋತ, ವೀರುಪಾಕ್ಷಯ್ಯ ನೀರಲಗಿಮಠ, ಪಾಲಿಕೆ ಸದಸ್ಯೆ ವೀಣಾ ವಿಜಾಪುರೆ, ಬುಡಾ ಮಾಜಿ ಅಧ್ಯಕ್ಷ ಘೂಳಪ್ಪ ಹೊಸಮನಿ, ಮುರುಘೇಂದ್ರಗೌಡ ಪಾಟೀಲ, ದಾದಾಗೌಡ ಬಿರಾದರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.