Belagavi News In Kannada | News Belgaum

ಸಚಿವ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀ ಸ್ಪರ್ಧೆ ಬಹುತೇಕ ಫಿಕ್ಸ್‌ ..!

ಧಾರವಾಡ: ನಾನು ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, ಯಾವ ಕಾರಣಕ್ಕೂ ನಾನು ಹೋರಾಟದಿಂದ ಹಿಂದೆ ಸರಿಯಲ್ಲ. ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೀಘ್ರವೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಈ ಮೂಲಕ ಪಕ್ಷೇತರ ಅಭ್ಯರ್ಥಿಯಾಗಿ ಧಾರವಾಡದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ..

ಹುಬ್ಬಳ್ಳಿಯಲ್ಲಿ ಭಕ್ತರ ಸಭೆ ಬಳಿಕ ಮಾತನಾಡಿದ ಅವರು, ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಆಗಬೇಕೆಂದು ಭಕ್ತರು ಹೇಳಿದ್ದಾರೆ. ಉತ್ತರ ಭಾರತದ ರೀತಿಯಲ್ಲಿ ದಕ್ಷಿಣ ಭಾರತದಲ್ಲಿ ಸ್ವಾಮೀಜಿಗಳು ರಾಜಕಾರಣಕ್ಕೆ ಬರಬೇಕೆಂದು ಭಕ್ತರು ಸಲಹೆ ನೀಡಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ನೀವೇ ಬರಬೇಕಂದು ಭಕ್ತರು ಒಕ್ಕೊರಲಿನ ಅಭಿಪ್ರಾಯ ಹೇಳಿದ್ದಾರೆ ಎಂದು ಹೇಳಿದರು.
ನಮ್ಮ ಹಿರಿಯ ಗುರುಗಳು ಮತ್ತು ಮಠದ ಭಕ್ತರ ಅಭಿಪ್ರಾಯ ಕೇಳಬೇಕಿದೆ. ಅತಿ ಶೀಘ್ರದಲ್ಲಿ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಅಂತಿಮ ನಿರ್ಧಾರವನ್ನ ಪ್ರಕಟಿಸುತ್ತೇನೆ. ನಾನು ಯಾವುದೇ ಆಮಿಷಕ್ಕೆ ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, ಯಾವ ಕಾರಣಕ್ಕೂ ನಾನು ಹೋರಾಟದಿಂದ ಹಿಂದೆ ಸರಿಯಲ್ಲ ಎಂದು ದಿಂಗಾಲೇಶ್ವರ ಸ್ವಾಮೀಜಿ ಸ್ಪಷ್ಟಪಡಿಸಿದರು..

ಇನ್ನು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಬೇಕು ಎಂದು ಭಕ್ತರು ನಿರ್ಣಯ ಕೈಗೊಂಡಿದ್ದು, ಧಾರವಾಡದಲ್ಲಿ ಭಕ್ತರ ಸಭೆ ಕರೆದು ಸ್ಪರ್ಧೆ ಬಗ್ಗೆ ಚರ್ಚೆ ನಡೆಸಿ ಈ ತೀರ್ಮಾನ ಹೇಳಲಾಗಿದೆ. ಧಾರವಾಡ ಲೋಕಸಭೆ ಚುನಾವಣೆ ಹಿತರಕ್ಷಣಾ ಸಮಿತಿ ರಚನೆ ಮಾಡಲು ಈ ಸಭೆಯಲ್ಲಿ ತೀರ್ಮಾನಿಸಲಾಯಿತು..


ಪ್ರಹ್ಲಾದ್‌ ಜೋಶಿಗೆ ಸಂಕಷ್ಟ: 
ದಿಂಗಾಲೇಶ್ವರ ಸ್ವಾಮೀಜಿ ಹಾಲಿ ಸಂಸದ ಪ್ರಹ್ಲಾದ್‌ ಜೋಶಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ. ಇದರಿಂದ ಐದನೇ ಬಾರಿ ಆಯ್ಕೆ ಬಯಸಿ ಕಣಕ್ಕಿಳಿದಿದ್ದ ಪ್ರಹ್ಲಾದ್‌ ಜೋಶಿಗೆ ಸವಾಲು ಎದುರಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಬ್ರಾಹ್ಮಣ VS ಲಿಂಗಾಯತ ವೇದಿಕೆ ಸೃಷ್ಟಿಯಾಗುತ್ತಿದ್ದು, ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಿದರೆ ಲಿಂಗಾಯತ ಮತಗಳು ವಿಭಜನೆಯಾಗುವುದು ಖಂಡಿತ. ಈ ಹಿನ್ನೆಲೆ ಬಿಜೆಪಿ ನಾಯಕರು ದಿಂಗಾಲೇಶ್ವರ ಸ್ವಾಮೀಜಿ ಮನವೊಲಿಸುವ ಕಾರ್ಯವನ್ನು ಮಾಡುತ್ತಿದ್ದಾರೆ..