Belagavi News In Kannada | News Belgaum

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕು: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕಾಗಿದೆ. ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿದೆ. ಅದಕ್ಕಾಗಿ ಬಡವರ ಪರ, ನಿರಾಶ್ರಿತರ ಪರವಿರುವ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸುವಂತೆ ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ‌ ಮಾಡಿದರು.

ಚಿಕ್ಕೋಡಿ ‌ಲೋಕಸಭೆ ವ್ಯಾಪ್ತಿಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಸಲಾಮವಾಡಿ, ಕೋಟ, ನಾಗನೂರ ಕೆ.ಎಂ. ಹಾಗೂ ಮಣಗುತ್ತಿ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ಪ್ರಚಾರ ಸಭೆಗಳಲ್ಲಿ ಮಾತನಾಡಿ, ಬಡವರ ಪರವಾದ ಕಾರ‍್ಯಕ್ರಮ ನೀಡುವುದು ಕಾಂಗ್ರೆಸ್‌ ಪಕ್ಷ ಮಾತ್ರ. ಇದನ್ನು ಮತದಾರರು ಬೆಂಬಲಿಸುವ ಮೂಲಕ ಪಕ್ಷ ಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿವೆ. ಪ್ರತಿಯೊಬ್ಬರ ಏಳಿಗೆಗೆ ಯೋಜನೆಗಳು ಸಹಕಾರಿಯಾಗಿವೆ. ಕೊಟ್ಟ ಮಾತಿನಂತೆ ಸರ್ಕಾರ ಜನರಿಗೆ ಗ್ಯಾರಂಟಿ ಯೋಜನೆ ನೀಡಿದೆ. ಮುಂದಿನ ದಿನಗಳಲ್ಲೂ ಮಾದರಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಪರ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಆದ್ದರಿಂದ ಈ ಬಾರಿ ಕೈ ಪಕ್ಷಕ್ಕೆ ಮತ ನೀಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.

ಶೈಕ್ಷಣಿಕ ಸೇರಿದಂತೆ ಕ್ರೀಡಾ ಪಟುಗಳಿಗೆ  ಸತೀಶ ಜಾರಕಿಹೊಳಿ  ಫೌಂಡೇಶನ್‌ ದಿಂದ ಸಹಾಯ-ಸಹಕಾರ ಮಾಡಲಾಗಿದೆ. ನಿಮ್ಮ ಮನೆ ಮಗಳಾದ ನನ್ನನ್ನು ಮತದಾರರು ಸಹಕರಿಸಬೇಕು. ಈ ಕ್ಷೇತ್ರದಿಂದ ಗೆಲ್ಲಲು ಶಕ್ತಿ ತುಂಬಬೇಕು ಎಂದ ಅವರು, ಬೇರುಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಸಿದ್ದರಾಗಬೇಕು. ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದವರು ಕಾಂಗ್ರೆಸ್, ದೇಶಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ಮಾಡಿದವರು ಕಾಂಗ್ರೆಸ್ . ಹೀಗಾಗಿ ಜಿಲ್ಲೆ ಸೇರಿದಂತೆ ದೇಶದ ಅಭಿವೃದ್ಧಿಗೆ ಕಾರಣವಾಗಿರುವ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಟ್ಟು ನನ್ನನ್ನು ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಅರಿವು ಮೂಡಿಸುವ ಮಹತ್ತರವಾದ ಜವಾಬ್ದಾರಿ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರ ಮೇಲಿದೆ ಎಂದ ಅವರು, ದೇಶದ ಭದ್ರ ಬುನಾದಿಗೆ ಯುವಕರು ರಾಜಕೀಯಕ್ಕೆ ಬರಬೇಕಾಗಿದೆ. ಹೀಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಅವಕಾಶ ಸಿಕ್ಕಿದೇ , ತಂದೆಯರಿಗೆ ತೋರಿದ ಅಭಿಮಾನ-  ಬೆಂಬಲ ನಿಮ್ಮ ಮನೆ  ಮಗಳಾದ ನನಗೂ ನೀಡಿ, ಕ್ಷೇತ್ರದ ಜನರ ಸೇವೆ ಮಾಡಲು ಮತದಾರರು ಆಶೀರ್ವಾದ ಮಾಡಬೇಕು ಎಂದರು. ಇದೇ ವೇಳೆ ವಿವಿಧ ಗ್ರಾಮಗಳಲ್ಲಿ ಕೈಬ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಮಹಿಳೆಯರು ಸನ್ಮಾನಿಸಿದರು. ಈ‌ ಸಂದರ್ಭದಲ್ಲಿ ವಿವಿಧ ಗ್ರಾಮದ ಮುಖಂಡರು ಹಾಗೂ ಹಿರಿಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.//////