Belagavi News In Kannada | News Belgaum

ಕೊಳವೆ ಬಾವಿಯಿಂದ ಸುರಕ್ಷಿತವಾಗಿ ಮಗು ಹೊರಕ್ಕೆ ತೆಗೆದ ರಕ್ಷಣಾ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ನ್ನು ಸುರಕ್ಷಿತವಾಗಿ  ಹೊರಕ್ಕೆ ತೆಗೆದ  ರಕ್ಷಣಾ ಸಿಬ್ಬಂದಿಗೆ  ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಹೇಳಿಕೆ  ನೀಡಿರುವ ಸಚಿವರು, ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಕೊನೆಗೂ ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಹೊರ ತರಲಾಗಿದೆ. ಇವರ ಕಾರ್ಯಕ್ಕೆ ಅಭಿನಂದನೆ ಮತ್ತು ಧನ್ಯವಾದಗಳನ್ನು ತಿಳಿಸಿದ್ದಾರೆ./////