Belagavi News In Kannada | News Belgaum

ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ತಾಲೂಕು ಮಟ್ಟದ ಕಾರ್ಯಕರ್ತರ ಪ್ರಚಾರ ಸಭೆ

ಸರ್ವರ ಏಳಿಗೆ ಬಯಸುವುದು ಕಾಂಗ್ರೆಸ್ ಪಕ್ಷ ಮಾತ್ರ: ಸಚಿವ ಸತೀಶ್ ಜಾರಕಿಹೊಳಿ

ಕಾಗವಾಡ: ರೈತರು, ಕಾರ್ಮಿಕರು, ಮಹಿಳೆಯರು, ಬಡವರರು, ಹಿಂದುಳಿದವರು ಸೇರಿದಂತೆ ಸರ್ವರ ಏಳಿಗೆಯನ್ನು ಬಯಸುವುದು ಕಾಂಗ್ರೆಸ್ ಪಕ್ಷ ಮಾತ್ರವೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಕಾಗವಾಡ ತಾಲೂಕಿನ ಉಗಾರ ಮಂಗಸೂಳಿ ರಸ್ತೆಯಲ್ಲಿರುವ ದಿ. ಅಲಗೌಡ ಕಾಗೆಯವರ ಕಾರ್ಯಾಲಯದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಭರಮಗೌಡ (ರಾಜು) ಕಾಗೆಯವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ವರ ಅಭಿವೃದ್ಧಿಗೆ ಶ್ರಮಿಸುವ ಪಕ್ಷ. ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಜನಪರ ಯೋಜನೆಗಳನ್ನು ತಂದಿದೆ. ಆದರೆ ರಾಜ್ಯದಲ್ಲಿ ಬಿಎಸ್ವೈ,ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ    ಒಂದೇ ಒಂದು ಗ್ರಾಮ ಪಂಚಾಯತ್ ಗಳಿಗೆ ಮನೆಗಳನ್ನು ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

2013 ರಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದಲ್ಲಿ  ಜನತೆಗೆ 5 ಲಕ್ಷ ಮನೆಗಳನ್ನು ನೀಡಿದ್ದಾರೆ. ಈ ಬಾರಿಯೂ 4 ಲಕ್ಷ ಮನೆಗಳನ್ನು ಸರ್ಕಾರದಿಂದ ನೀಡಲಿದ್ದೇವೆ ಎಂದರು.

ಮಳೆ ಅಭಾವದಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಅದಕ್ಕಾಗಿ ಶಾಸಕ ಲಕ್ಷ್ಮಣ ಸವದಿಯವರು, ನಾನು ಈಗಾಗಲೇ ಮಹಾರಾಷ್ಟ್ರದಿಂದ ನೀರು ಬಿಡಿಸಲು ಎಲ್ಲಾ ರೀತಿಯ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿಯವರೆಗೆ ಹಿಡಕಲ್ ಡ್ಯಾಮ್ ಮೂಲಕ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುತ್ತೇವೆಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಪ್ರಿಯಂಕಾ ಜಾರಕಿಹೊಳಿಗೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಅನುವು ಮಾಡಿಕೊಟ್ಟಿದೆ. ಪ್ರಿಯಂಕಾ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ರಾಜಕೀಯ ಶಕ್ತಿಯನ್ನು ನೀಡಿದರೆ, ನಿಮ್ಮ ಜತೆಗೂಡಿ ಇನ್ನಷ್ಟು ಅಭಿವೃದ್ಧಿಗೆ ಶ್ರಮಿಸುತ್ತಾರೆಂದು ಹೇಳಿದರು.

ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಪ್ರಿಯಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ, ನಿಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಜ್ಯದಲ್ಲಿ  ಮಹಿಳೆಯರಿಗೂ ಹೆಚ್ಚಿನ ಸಂಖ್ಯೆಯಲ್ಲಿ ಲೋಕಸಭೆ ಟಿಕೆಟ್ ಗಳನ್ನು ನೀಡಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆದರೂ ದೇಶದ ರೈತರ ಅಭಿವೃದ್ಧಿ ಆಗಲಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದ ಜನತೆಗೆ ಸಾಕಷ್ಟು ಕೊಡುಗೆ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಆದರೆ ಪ್ರಧಾನಿ ಮೋದಿ ಹೇಳಿಕೆಗಳು, ಭರವಸೆಗಳು ಮಾತಾಗಿಯೇ ಉಳಿದಿವೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ರೈತರನ್ನು ಧಮನ ಮಾಡುವ ಕೆಲಸ ಮಾಡುತ್ತಿದೆ. 400 ನೂರು ಸೀಟು ಗೆಲ್ಲುತ್ತೇವೆ ಎಂದು ಹೇಳುತ್ತಿರುವ ಬಿಜೆಪಿಯವರಿಗೆ 200 ಕ್ಕಿಂತ ಹೆಚ್ಚು ಸೀಟು ಗೆಲ್ಲಲ್ಲ ಎಂಬ ವರದಿಯನ್ನು  ಗುಪ್ತಾಚಾರ ಇಲಾಖೆ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ಕಾರಣ ಎಂದರು.

ಅಥಣಿ, ಕಾಗವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಗೆ ಹೆಚ್ಚಿನ ಮತಗಳನ್ನು ಪಡೆಯುತ್ತಾರೆ. ಕಾರಣ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದರು.

ಶಾಸಕ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಮಾತನಾಡಿ, ಕೇವಲ ಇದು ಎರಡು ಪಕ್ಷಗಳ ವಿರುದ್ದ ನಡೆಯುವ ಚುನಾವಣೆ ಅಲ್ಲಾ, ಈ ಚುನಾವಣೆ ನಾವು ಯುದ್ದ ಎಂದು ತಿಳಿದಿದ್ದೇವೆ. ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಇಂದು ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಬದಲಾವಣೆ ತರಬೇಕಾಗಿದೆ ಎಂದು ಕರೆ ನೀಡಿದರು.

ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಯುವಕರಿಗೆ ಉದ್ಯೋಗ ಸೃಷ್ಟಿಸುತ್ತೇವೆ, ಕಪ್ಪು ಹಣ ತರುತ್ತೇವೆ, ಅಚ್ಛೆ ದಿನ್ ತರುತ್ತೇವೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ ಇದುವರೆಗೆ ಹೇಳಿದ ಭರವಸೆ ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಸುಳ್ಳು ಹೇಳಿ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯವರ ಮಾತನ್ನು ನಂಬದೇ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸಬೇಕೆಂದು ತಿಳಿಸಿದರು.

ಪ್ರಿಯಂಕಾ ಜಾರಕಿಹೊಳಿ ಎರಡು ಲಕ್ಷ ಮತಗಳ  ಅಂತರದಿಂದ ಗೆದ್ದೆ ಗೆಲ್ಲುತ್ತಾರೆಂಬ ವಿಶ್ವಾಸ ನನಗಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ನೀಡುವು ಮೂಲಕ ನಿಮ್ಮನ್ನು ಪ್ರಗತಿಯತ್ತ ಕೊಂಡೊಯುತ್ತಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನಿಮ್ಮ ಅಮೂಲ್ಯ ಮತ ನೀಡಬೇಕೆಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದ್ದಿದ್ದು, ಮೇ, 7 ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ನೀಡಬೇಕೆಂದು ಮನವಿ ಮಾಡಿದರು.

ತಂದೆ, ಸಚಿವರಾದ ಸತೀಶ್ ಜಾರಕಿಹೊಳಿ ಅವರು ಲೋಕೋಪಯೋಗಿ ಇಲಾಖೆ ಯಿಂದ ಕಾಗವಾಡ ಕ್ಷೇತ್ರಕ್ಕೆ 11 ಕೋಟಿ ರೂ. ವೆಚ್ಚದಲ್ಲಿ ರಸ್ತೆ, 1.5 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ನಿರ್ಮಾಣ ಸೇರಿದಂತೆ ಎಸಿಪಿ, ಟಿಎಸ್ಪಿಯಲ್ಲಿಯೂ ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.

ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ಜನಕ್ಕೆ ಅನುಕೂಲ ಗಳನ್ನು ಕಲ್ಪಿಸಿದ್ದೇವೆ. ಯುವಕರಿಗೆ ಉಚಿತ ಆರ್ಮಿ, ಪೊಲೀಸ್ ಸೇರಿದಂತೆ ಸರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಉಚಿತ ತರಬೇತಿ ನೀಡುತ್ತಿದ್ದೇವೆ. ಚಿಕ್ಕೋಡಿ ಕ್ಷೇತ್ರದಲ್ಲಿಯೂ ನನಗೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಕಾಂಗ್ರೆಸ್ ಬಾವುಟ ಹಾರಿಸಿದರೆ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೆನೆಂದು ಹೇಳಿದರು.

ಶಾಸಕ ಮಹೇಂದ್ರ ತಮ್ಮಣ್ಣವರ್ ಮಾತನಾಡಿ, ರಾಜ್ಯ ಸರ್ಕಾರ ಐದು ಗ್ಯಾರಂಟಿ ನೀಡಿದ್ದು, ನಡೆದಂತೆ ನುಡಿದ್ದೇವೆ,  ಆದರೆ ಕೇಂದ್ರ ಬಿಜೆಪಿ ಸರ್ಕಾರ ಹತ್ತು ವರ್ಷಗಳಿಂದ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ್, ಶಾಸಕರಾದ ವಿಶ್ವಾಸ ವೈದ್ಯ,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕರಾದ ಶ್ಯಾಮ್ ಘಾಟಗೆ, ಮೋಹನ ಶಾ, ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್, ಕಾಂಗ್ರೆಸ್ ಮುಖಂಡರಾದ ಎಂ.ಎ.ಮಗದುಮ್, ಗಜಾನನ ಮಂಗಸೂಳಿ, ಚಂದ್ರಕಾಂತ, ಸದಾಶಿವ ಬುಟಾಳಿ, ದಿಗ್ವಿಜಯ ಪವಾರ್, ಓಂ ಪ್ರಕಾಶ ಪಾಟೀಲ್,  ಕಾಗವಾಡ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ವಿಜಯಕುಮಾರ ಅಕಿವಾಟೆ, ಚಿಕ್ಕೋಡಿ ಜಿಲ್ಲಾ ಮಾಧ್ಯಮ ವಕ್ತಾರ ರಾವಸಾಹೇಬ ಐಹೊಳೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.