Belagavi News In Kannada | News Belgaum

ವಿನಯದಿಂದ ವಿದ್ಯೆಯನ್ನು ಪಡೆಯಲು ಪ್ರಯತ್ನಿಸಬೇಕು: ಆರ್ ಎಸ್ ವಾಲಿಶೆಟ್ಟಿ

ಬೆಳಗಾವಿ,ಏ.10:ವಿದ್ಯಾರ್ಥಿ ಜೀವನದಲ್ಲಿ ವಿನಯತೆ, ತಾಳ್ಮೆ, ಜ್ಞಾನ ಪಡೆಯಲೇಬೇಕು ಎನ್ನುವ ಛಲ ಹಾಗೂ ಓದುವ ಹವ್ಯಾಸ ಇರಬೇಕಾದದ್ದು ತುಂಬಾ ಅವಶ್ಯಕವಾಗಿದೆ” ಎಂದು ಹುಕ್ಕೇರಿ ತಾಲೂಕಿನ ಬೆಳವಿ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಏಳನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಆರ್ ಎಸ್ ವಾಲಿಶೆಟ್ಟಿ ಅವರು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ವಿನಯದಿಂದ ವಿದ್ಯೆಯನ್ನು ಪಡೆಯಲು ಪ್ರಯತ್ನಿಸಬೇಕು. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುವ ಬದಲು ಪುಸ್ತಕಗಳನ್ನು ಓದುವ ಮತ್ತು ಅಧ್ಯಯನದಲ್ಲಿ ತೊಡಗುವ ಮೂಲಕ ಸಮಯದ ಸದುಪಯೋಗ ಪಡಿಸಿಕೊಳ್ಳಬೇಕು. ಜ್ಞಾನದ ಜೊತೆಗೆ ಆರೋಗ್ಯದ ಕಡೆಗೂ ಮಕ್ಕಳು ಹೆಚ್ಚು ಆಸಕ್ತಿ ವಹಿಸುವಂತೆ ಕಿವಿಮಾತು ಹೇಳಿದರು.
ಏಳನೇ ವರ್ಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿವಿಧ ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಮತ್ತು ಬಹುಮಾನಗಳನ್ನು ವಿತರಿಸಲಾಯಿತು. ಹಿರಿಯ ಶಿಕ್ಷಕರಾದ ನದಾಫ್ ಅವರು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಸಂಘದ ಪದಾಧಿಕಾರಿಗಳು, ಪ್ರಧಾನ ಗುರುಗಳು, ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.