Belagavi News In Kannada | News Belgaum

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಕರೆ

ಬೆಳಗಾವಿ: ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ. ಆದ್ದರಿಂದ ಕೈ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಲೋಕೋಪಯೋಗಿ  ಸಚಿವ ಸತೀಶ್‌ ಜಾರಕಿಹೊಳಿ ಕರೆ ನೀಡಿದರು.
ಚಿಕ್ಕೋಡಿ ಕಾಂಗ್ರೆಸ್ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಆಯ್ಕೆಯಾದ ಸದಸ್ಯರಿಗೆ ಸನ್ಮಾನಿಸಿ ಅವರು ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವರಿಕೆ ಮಾಡಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು.


ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರ ಒಲವಿದ್ದು, ಮತದಾರರು ಕಾಂಗ್ರೆಸ್‌ಗೆ ಹೆಚ್ಚಿನ ಮತ ಚಲಾಯಿಸುವುದರ ಮೂಲಕ ಗೆಲುವಿಗೆ ಸಹಕರಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಯಾರೇ ಆದರೂ, ಕಾಂಗ್ರೆಸ್ ಗೆಲುವಿಗೆ ಸನ್ನದ್ಧರಾಗಬೇಕು. ಚುನಾವಣೆಯಲ್ಲಿ ಕಾರ್ಯಕರ್ತರ ಪಾತ್ರ ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಅಲ್ಲದೇ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಮೇಲ್ವಿಚಾರಣೆಗೆ ರಾಜ್ಯ ಮಟ್ಟದ ಕಾರ್ಯವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮತ್ತು ಅಗತ್ಯ ನೀತಿ, ಸುಧಾರಣೆಗಳು, ಅನುಷ್ಠಾನದ ವಿಧಾನಗಳಲ್ಲಿ ಸರಳೀಕರಣ ತರಲು ಹಾಗೂ ತಳಮಟ್ಟದಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರಗಳನ್ನು ಮತ್ತು ತಾಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಸದಸ್ಯರು ಮುಂದಾಗಬೇಕು. ಅಲ್ಲದೇ ಕಾಂಗ್ರೆಸ್‌ ಸರ್ಕಾರದ ಸಾಧನೆಯನ್ನು ಜನರಿಗೆ  ತಿಳಿಸಿ ಲೋಕಸಭಾ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳು ಗೆಲುವಿಗೆ ಶ್ರಮಿಸಿಬೇಕು ಎಂದರು.

ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಸದಸ್ಯರಾಗಿ  ಆಯ್ಕೆಯಾದ ಬಸವರಾಜ್ ನಾಯಿಕ, ಗೋಪಾಲ ದಳವಾಯಿ, ಪ್ರಭಾಕರ್ ಕೋರೆ, ಮಹಾದೇವ ಕೊಲ್ಲಾಪುರೆ,  ರುದ್ರಯ್ಯ ಹಿರೇಮಠ ಅವರಿಗೆ ಸಚಿವ ಸತೀಶ್‌ ಜಾರಕಿಹೊಳಿ  ಅವರು ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ ಸನ್ಮಾನ ಮಾಡಿದರು.ಈ ವೇಳೆ ಬುಡಾ ನೂತನ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ,ಲಕ್ಷ್ಮಣರಾವ್ ಚಿಂಗಳೆ, ವೀರಕುಮಾರ ಪಾಟೀಲ್, ನಿರ್ಮಲಾ ಪಾಟೀಲ ಸೇರಿದಂತೆ ಇತರರು ಇದ್ದರು./////