Belagavi News In Kannada | News Belgaum

ಚಿಕ್ಕೋಡಿಯಲ್ಲಿ 16 ಲಕ್ಷ ನಗದು ಸೀಜ್: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಲೋಕಸಭಾ ಚುನಾವಣೆಯದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ  ಕೂಡ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಅಂತೆಯೇ ಚಿಕ್ಕೋಡಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ತಡರಾತ್ರಿ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ಪೊಲೀಸರ ತಪಾಸಣೆ ವೇಳೆ ಹಣ ಪತ್ತೆಯಾಗಿದೆ.ಬಸ್ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ 31 ಸಾವಿರ ರೂ. ವಶಕ್ಕೆ ಪಡೆದಿದ್ದಾರೆ.
ಚಿಕ್ಕೋಡಿಯಿಂದ ಮಹಾರಾಷ್ಟ್ರದ ಇಚಲಕರಂಜಿ ನಗರಕ್ಕೆ ತೆರಳುತ್ತಿದ್ದ ಬಸ್ ತಪಾಸಣೆ ವೇಳೆ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಅಕ್ರಮ ಹಣದ ಜೊತೆಗೆ ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹಣ ಸಾಗಾಟ ಮಾಡುವರು ಮಹಾರಾಷ್ಟ್ರದ ಇಚಲಕರಂಜಿ ನಗರದ ನಿವಾಸಿಗಳಾಗಿದ್ದಾರೆ. ಪ್ರಕರಣವನ್ನ ಆದಾಯ ತೆರಿಗೆ ಇಲಾಖೆಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ./////