Belagavi News In Kannada | News Belgaum

ನಿರಾಣಿ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಪ್ರತಿಭಟನೆ

ಬೆಳಗಾವಿ: ಕೂಡಲ ಸಂಗಮ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ತಂತ್ರ ಹಾಗೂ ನಮ್ಮ ಸಮಾಜದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹಗುರವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಶುಕ್ರವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಮುಖಂಡರು ಪ್ರತಿಭಟನೆ ನಡೆಸಿ ನಿರಾಣಿ ಫೋಟೋ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಇನ್ನೊಂದು ಬಾರಿ ನಿರಾಣಿಗೆ ಎಚ್ಚರಿಕೆ ನೀಡಿದರು. ಮುರುಗೇಶ ನಿರಾಣಿ ನಮ್ಮ ಸಮಾಜದ ವ್ಯಕ್ತಿಯಾಗಿ ನಮಗೆ ನ್ಯಾಯ ಕೊಡಿಸಲು ಆಗಲಿಲ್ಲ. ಆದರೆ ನಮ್ಮ ಸಮಾಜದವರಿಗೆ ಅವಮಾನ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದರು./////