Belagavi News In Kannada | News Belgaum

ಏ.17ರಂದು ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ  ಅಭ್ಯರ್ಥಿಯಾಗಿ ಜಗದೀಶ್‌ ಶೆಟ್ಟರ ಏ.17ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಅಂದು ಬೆಳಗ್ಗೆ  ಬೃಹತ್ ಮೆರವಣಿಗೆ ಮೂಲಕ ಬಿಜೆಪಿ  ಅಭ್ಯರ್ಥಿ ಜಗದೀಶ್‌ ಶೆಟ್ಟರ ಮೆರವಣಿಗೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು. ಅಂದು ಬೆಳಗಾವಿ ಲೋಕಸಭಾ ಚುನಾವಣೆಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಹನುಮಂತ ನಿರಾಣಿ, ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ  ಅನೇಕ ಗಣ್ಯರು ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲಿದ್ದಾರೆ./////