Belagavi News In Kannada | News Belgaum

ದಾಖಲೆ ಇಲ್ಲದ 10 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು, ಚುನಾವಣಾ ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆಯ ನಾಯನೇಗಲಿ ಚೆಕ್ ಪೋಸ್ಟ್ ನಲ್ಲಿ ವಾಹನವನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಮಹಾರಾಷ್ಟ್ರ ಹಾಗೂ ಕರ್ನಾಟಕ ಮೂಲದ ಎರಡು ವಾಹನದಲ್ಲಿ 10, 77,200 ರೂಪಾಯಿ ನಗದು ಹಣ ಪತ್ತೆಯಾಗಿದೆ. ಯಾವುದೇ ಸೂಕ್ತ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ಹಣ ಹಾಗೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಜಂಟಿ ಕಾರ್ಯಾಚರಣೆ ವೇಲೆ ಈ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.///////