Belagavi News In Kannada | News Belgaum

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ (ಏ.15) ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದೇ ವೇಳೆ ಜಗದೀಶ ಶೆಟ್ಟರ ಅವರು ಮಾತನಾಡಿ, ಏ. 17 ಬುಧವಾರ ಬೆಳಗ್ಗೆ 10 ಗಂಟೆಗೆ ಸಾವಿರಾರು ಕಾರ್ಯಕರ್ತರೊಂದಿಗೆ ಬೆಳಗಾವಿಯ ಸಮಾದೇವಿ ಗಲ್ಲಿಯ ಶ್ರೀ ಸಮಾದೇವಿ ಮಂದಿರದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಬೃಹತ್ ಮೆರಣಣಿಗೆ ಮೂಲಕ ನಾಮಪತ್ರ ಸಲ್ಲಿಸಲಾವುದು ಎಂದು ತಿಳಿಸಿದರು.
ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಮಾಜಿ ಸಚಿವ ರಮೆಶ್ ಜಾರಕಿಹೊಳಿ, ಸಂಸದರಾದ ಮಂಗಳ ಅಂಗಡಿ, ಮಾಜಿ ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಸಾಥ್ ನೀಡಿದರು‌.//////