Belagavi News In Kannada | News Belgaum

ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲೂ ಅಧಿಕಾರಕ್ಕೆ ತರಲು ಶ್ರಮಿಸಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ನಮ್ಮ ಕಾಂಗ್ರೆಸ್ ಸರಕಾರವು ಜನರ ಭಾವನೆಗಳನ್ನು ಗೌರವಿಸುತ್ತಾ, ಅವರ ಬದುಕಿಗೆ ನೆರವಾಗುವಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಹೀಗಾಗಿ ಮುಂಬರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಜನಪರ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲೂ ಅಧಿಕಾರಕ್ಕೆ ತರಲು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಧ್ಯಕ್ಷ  ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಮೋದಗಾ ಹಾಗೂ ಶೇಟ್ಟಿಹಳಿ ಗ್ರಾಮದಲ್ಲಿ ಹಮ್ಮಿಕೊಂಡಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಚಿಕ್ಕೋಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ನೀವೆಲ್ಲರೂ ಆಶೀರ್ವಾದ ಮಾಡಬೇಕು. ಸ್ಥಳೀಯ ಶಾಸಕರು ಹಾಗೂ ಸಚಿವರಾದ ನಮ್ಮ ತಂದೆಯವರಾದ ಶ್ರೀ ಸತೀಶ ಜಾರಕಿಹೊಳಿ ಅವರನ್ನು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಚಿಕ್ಕೋಡಿ ಲೋಕಸಭೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಹಾಗೂ ಸುವರ್ಣ ಚಿಕ್ಕೋಡಿ ಕನಸು ನನಸು ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ಪಂಚ್ ಗ್ಯಾರಂಟಿಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮತದಾರರ ಮನಸ್ಸು ಗೆಲ್ಲಬೇಕು. ಮುಂದೆ ನಿಮ್ಮ ಸಹಾಯ ಸಹಕಾರ ಇರಲಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಡರು.

ಕಾಂಗ್ರೆಸ್ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ.ಬಿಜೆಪಿಯವರಿಗೆ ಕೇವಲ ಶ್ರೀಮಂತ ಉದ್ಯಮಿಗಳ ಪರವಾಗಿ ಕೆಲಸ ಮಾಡುವುದು ಗೊತ್ತು. ಆದರೆ ಇಂದಿರಾ ಗಾಂಧಿ ಅವರಿಂದ ಹಿಡಿದು ಸಿದ್ದರಾಮಯ್ಯವರೆಗೆ ಕಾಂಗ್ರೆಸ್ ಪಕ್ಷದ ಎಲ್ಲರೂ ಬಡವರ ಪರ ಕೆಲಸ ಮಾಡಿದ್ದಾರೆ. ಕ್ಷೇತ್ರದ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದ ಅವರು, ನಮ್ಮ ಸರ್ಕಾರ ಬಡವರ ಪರವಾಗಿದ್ದು, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದೆ. ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ಘೋಷಿಸಿದ್ದ ಎಲ್ಲಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ, ಇದು ನಮ್ಮ ಸರ್ಕಾರದ ಹೆಗ್ಗಳಿಕೆಯಾಗಿದೆ ಎಂದರು. ಇದಕ್ಕೂ ಮೊದಲು ಗ್ರಾಮಕ್ಕೆ ಆಗಮಿಸಿದ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರಿಗೆ  ಮಹಿಳೆಯರು ಆರತಿ ಎತ್ತಿ ಸನ್ಮಾನಿಸಿದರು. ಈ‌ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.///////