Belagavi News In Kannada | News Belgaum

27ನೇ ವಸಂತಕ್ಕೆ ಕಾಲಿಟ್ಟ ಪ್ರಿಯಂಕಾಗೆ ಶುಭಾಶಯಗಳ ಮಹಾಪೂರ

ಷ್ಟಕ್ಕೆ ಸದಾ ಮಿಡಿಯುವ ಯುವ ನಾಯಕಿ-ತಂದೆಗೆ ತಕ್ಕ ಮಗಳು ಪ್ರಿಯಂಕಾ ಜಾರಕಿಹೊಳಿ

 

ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ, ಕಾಂಗ್ರೆಸ್ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಅವರು  27ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಸಹಸ್ರ ಸಂಖ್ಯೆಯಲ್ಲಿ ಹುಟ್ಟು ಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.
ಹೌದು….ಕಾಂಗ್ರೆಸ್‌ ನಾಯಕಿ ಪ್ರಿಯಂಕಾ ಜಾರಕಿಹೊಳಿ ಅವರು 26 ವರ್ಷ ಕಳೆದು 27ನೇ ವರ್ಷಕ್ಕೆ ಕಾಲಿಡುತ್ತಿರುವ ಸಂಭ್ರಮದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅವರಿಗೆ ಶುಭಕೋರುವ ಸಂದೇಶಗಳು ರವಾನೆಯಾಗುತ್ತಿವೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅವರ ಅಭಿಮಾನಿಗಳು ಹುಟ್ಟುಹಬ್ಬದ ಪ್ರಯುಕ್ತ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚಿನ ಯುವ ನಾಯಕಿಗೆ ಶುಭ ಕೋರುತ್ತಿದ್ದಾರೆ.

ಸರಳ-ಸಜ್ಜನಿಕೆ ಹೊಂದಿರುವ ತಂದೆಗೆ ತಕ್ಕ ಮಗಳು: ಸಚಿವ ಸತೀಶ ಜಾರಕಿಹೊಳಿ ಅವರಂತೆ ಪ್ರಿಯಂಕಾ ಜಾರಕಿಹೊಳಿಯವರು ಅತ್ಯಂತ ಆದರ್ಶಮಯ-ಪರಿಪೂರ್ಣವಾದ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಬಂದಿದ್ದಾರೆ. ತಮ್ಮ ತಂದೆಯವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನೆಡೆಯುತ್ತಿದ್ದು, ಬಡವರು, ಜನ ಸಾಮಾನ್ಯರ ಜತೆ ಸಾಮಾನ್ಯರಂತೆ ಬೆರೆಯುವ ಅಪರೂಪದ ಗುಣವನ್ನು ಪ್ರಿಯಂಕಾ ಜಾರಕಿಹೊಳಿಯವರು ಮೈಗೂಡಿಸಿಕೊಂಡಿದ್ದಾರೆ. ಜನತೆಯ ಕಷ್ಟಕ್ಕೆ ಸದಾ ಮಿಡಿಯುವ ಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಯುವಜನರಿಗೆ ಉತ್ಸಾಹಿ, ಸ್ಫೂರ್ತಿದಾಯಕ ಯುವತಿಯಾಗಿ ಹೊರಹೊಮ್ಮಿದ್ದಾರೆ.


ಜನರ ಮನದಲ್ಲಿ ಮಿಂಚುತ್ತಿರುವ ನಾಯಕಿ: ಸಂಕಷ್ಟಕ್ಕೆ ಸ್ಪಂದಿಸುವಂತ ಸಹೃದಯಿ, ಕಲೆ, ಸಾಹಿತ್ಯ, ಕ್ರೀಡೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಉತ್ತರ ಕರ್ನಾಟಕದ ಪ್ರತಿಭೆಗಳಿಗೆ ರಾಜ್ಯಮಟ್ಟದ ವೇದಿಕೆ ಕಲ್ಪಿಸಿಕೊಟ್ಟು ಸರ್ವರಿಗೂ ಚಿರಪರಿಚಿತವಾದ ಯುವತಿ ಕಣ್ಮಣಿಯೇ ಪ್ರಿಯಂಕಾ ಜಾರಕಿಹೊಳಿ. ಲೋಕೋಪಯೋಗಿ ಸಚಿವ, ಯಮಕನಮರಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ ಜಾರಕಿಹೊಳಿ ಅವರ ಸುಪುತ್ರಿಯಾದ ಪ್ರಿಯಂಕಾ ಅವರು ರಾಜಕೀಯ ಪ್ರತಿಷ್ಠಿತ ಕುಟುಂಬದಿಂದ ಬಂದರೂ ಸಾಮಾಜಿಕ ಸೇವೆಯಿಂದಲೇ ಜಿಲ್ಲೆಯಲ್ಲಿ ಜನರ ಮನದಲ್ಲಿ ಯುವರಾಣಿಯಾಗಿ ಮಿಂಚುತ್ತಿದ್ದಾರೆ.


ನೊಂದ ಜೀವಗಳಿಗೆ ಭರವಸೆ ಹೊಂಬೆಳಕಾದ ನಾಯಕಿ:
 ಬೆಳಗಾವಿ ಸೇರಿದಂತೆ ರಾಜ್ಯದಲ್ಲಿಯೇ ಸತೀಶ ಜಾರಕಿಹೊಳಿ ಅವರು ಅತ್ಯಂತ ಪ್ರಭಾವಿ ರಾಜಕಾರಣಿಯಾಗಿದ್ದು, ಸಮಾಜ ಸೇವೆ ಮೂಲಕ ದೀನ ದಲಿತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ, ನೊಂದ ಜೀವಗಳಿಗೆ ಭರವಸೆ ಹೊಂಬೆಳಕಾಗಿದ್ದಾರೆ. 90ರ ದಶಕದಲ್ಲಿ ಸತೀಶ ಜಾರಕಿಹೊಳಿ ಅವರು ಸಮಾಜ ಸೇವೆಗೆ ಬಂದಿದ್ದು, ಶೋಷಿತರ ಪರ ದನಿಯಾಗಿದ್ದರು. ಸಾಮಾಜಿಕ ತಳಹದಿ ತತ್ವದಡಿ ಅಧಿಕಾರ ವೀಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ಈ ಮೂಲಕ ಎಲ್ಲ ಸಮುದಾಯಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರೆಲ್ಲರನ್ನೂ ಒಂದೇ ವೇದಿಕೆಗೆ ಕರೆದುಕೊಂಡು ಹೋಗುವುದು ಇತಿಹಾಸ. ಪ್ರತಿ ಜಿಲ್ಲೆಯಲ್ಲಿಯೂ ಸತೀಶ ಅಭಿಮಾನ ಬಳಗವು ಸತೀಶ ಸೂಚಿಸಿದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಈಗ ಸತೀಶ ಅವರ ಪುತ್ರಿ ಪ್ರಿಯಂಕಾ ಕೂಡ ತಂದೆಯಂತೆ ಬಡವರ ಕಷ್ಟಗಳಿಗೆ ಸ್ಪಂದಿಸುತ್ತ ಸದ್ಯ ಚಿಕ್ಕೋಡಿ ಲೋಕಸಭಾ ಚುನಾವಣೆ ಅದೃಷ್ಟದ ಪರೀಕ್ಷೆಗೆ ನಿಂತಿದ್ದಾರೆ.


ತಂದೆಗೆ ತಕ್ಕ ಮಗಳು ಪ್ರಿಯಂಕಾ ಜಾರಕಿಹೊಳಿ:  ಸಾಮಾನ್ಯವಾಗಿ ರಾಜಕಾರಣಿ ಮಕ್ಕಳು ಎಂದರೆ ಸಾಕು ದೌಲತ್ತಿನಲ್ಲೇ ಬದುಕು ಸಾಗಿಸುವವರು ಜಾಸ್ತಿ. ಅಂತಹುದರಲ್ಲಿ ಸಾಮಾನ್ಯರಲ್ಲಿ ಅಸಾಮಾನ್ಯ ವ್ಯಕ್ತಿತ್ವ ರೂಪಿಸಿಕೊಂಡವರು ವಿರಳ. ಆದರೆ ಇವೆಲ್ಲದಕ್ಕೂ ಭಿನ್ನವಾಗಿ ನಿಂತಿರುವುದು ಸಚಿವ ಸತೀಶ್ ಜಾರಕಿಹೊಳಿ‌‌ ಕುಟುಂಬದ ಕುಡಿ. ಜಾರಕಿಹೊಳಿ ಕುಟುಂಬದ ಮೂರನೇ ತಲೆಮಾರು ಸಧ್ಯ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಂಕಾ ಜಾರಕಿಹೊಳಿ ಅವರು ಲೋಕಸಭಾ ಅಖಾಡಕ್ಕೆ ಇಳಿದಿದ್ದಾರೆ. ತಂದೆಯ ಕೆಲಸದ ಶ್ರೀರಕ್ಷೆ ಇವರಿಗೆ ಇದ್ದರು. ನಾನು ಸಮಾಜಸೇವೆ ಮಾಡಿ ಜನರ ಹೃದಯ ಗೆಲ್ಲುವೆ ಎಂಬ ದೃಢ ನಿರ್ಧಾರದ ಮೂಲಕವೇ ರಾಜಕಾರಣ ಮಾಡುತ್ತಿರುವುದು ವಿಶೇಷ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರದು ಸಾಮಾನ್ಯರಲ್ಲಿ ಅಸಮಾನ್ಯ ವ್ಯಕ್ತಿತ್ವ. ಅಪಾರ ಜನಬೆಂಬಲ ಇದ್ದರೂ ಅದ್ಯಾವುದನ್ನು ತಲೆಗೆ ಹಚ್ಚಿಕೊಳ್ಳದೆ ಕೇವಲ ಶ್ರದ್ಧೆಯಿಂದ ಕೆಲಸ ಮಾಡುವ ಮೂಲಕ ಜನರ ಹೃದಯ ಗೆಲ್ಲಲು ಹೊರಟಿದ್ದಾರೆ ಎಂದರೆ ತಪ್ಪಾಗಲಾರದು.


ಪ್ರಿಯಂಕಾಗೆ ಅಪಾರ ಜನಬೆಂಬಲ: ಎಂಬಿಎ ಪದವಿ ಪಡೆದುಕೊಂಡು ತಂದೆಯಂತೆ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಿಯಂಕಾ ಅವರು ಹಳ್ಳಿಯ ಮುಗ್ಧ ಜನರನ್ನು ಕಾಣುವ ರೀತಿಯೇ ಬೇರೆ. ಯಾರೇ ಆದರು ನಮ್ಮ ಮನೆ ಮಗಳು ಎಂದು ಇಷ್ಟಪಡುವ ರೀತಿಯಲ್ಲಿ ನಡವಳಿಕೆ ಹೊಂದಿರುವ ಇವರ ವ್ಯಕ್ತಿತ್ವ. ಈಗಾಗಲೇ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ. ಅಥಣಿ, ರಾಯಬಾಗ, ಹಾರೂಗೇರಿ, ಕುಡಚಿ, ನಿಪ್ಪಾಣಿ, ಕಾಗವಾಡ, ಯಮಕನಮರಡಿ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು ಎಲ್ಲೆಡೆ ಅಪಾರ ಜನಬೆಂಬಲವೂ ಇವರಿಗೆ ವ್ಯಕ್ತವಾಗಿದೆ. ಜನರ ಪ್ರೀತಿ ಹಾಗೂ ವಿಶ್ವಾಸದಿಂದ ಈ ಬಾರಿ ಗೆಲುವು ನಮ್ಮದೆ ಎನ್ನುತ್ತಾರೆ ಪ್ರಿಯಂಕಾ ಜಾರಕಿಹೊಳಿ. ಒಟ್ಟಾರೆ ಗಮನಿಸುವುದಾದರೆ ಪ್ರಿಯಂಕಾ ಜಾರಕಿಹೊಳಿ ಅವರು ತಮ್ಮ ತಂದೆ ಸತೀಶ ಜಾರಕಿಹೊಳಿ ಅವರ ನೆರಳಿನಂತೆ ಸಾಗುತ್ತಿದ್ದು ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಅತ್ಯಂತ ಸಣ್ಣ ವಯಸ್ಸಿನಲ್ಲೇ ಸೇವಾ ಮನೋಭಾವ ಅಳವಡಿಸಿಕೊಂಡು ಮುನ್ನುಗುತ್ತಿರುವ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಅವರ ಭವಿಷ್ಯ ಉಜ್ವಲವಾಗಿ ಸಾಗಲಿ ಎನ್ನುವುದು ಸಾರ್ವಜನಿಕರ ಆಶಯವಾಗಿದೆ.