before post

ಬಸ್‌ಗೆ ಲಾರಿಯೊಂದು ಡಿಕ್ಕಿ: ಯುವಕ ಸ್ಥಳದಲ್ಲಿ ಮೃತ

news belagavi

0

ಬಸ್‌ಗೆ ಲಾರಿಯೊಂದು ಡಿಕ್ಕಿ: ಯುವಕ ಸ್ಥಳದಲ್ಲಿ ಮೃತ

ಬೆಳಗಾವಿ: 7/10 2018  ವಾಯುವ್ಯ ಸಾರಿಗೆ ಇಲಾಖೆ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿದ್ದಾರೆ. ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ರಾಷ್ಟೀಯ ಹೆದ್ದಾರಿಯ ಮೂಲಕ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಭೂತರಾಮಟ್ಟಿಯ ಹತ್ತಿರ ಇಂದು ಸಂಜೆ ವೇಳೆ ಈ ಅವಘಡ ಸಂಭವಿಸಿದೆ.

ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದಿರುವ ಕಾರಣ ಸದಾಶಿವ ಮಾಳಗೆ ಎಂಬ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದು, ಟ್ರಕ್ ಚಾಲಕ ಸೇರಿದಂತೆ ಕೆಲವರಿಗೆ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.////