Belagavi News In Kannada | News Belgaum

ಏ. 20ರಂದು ಬೆಳಗಾವಿಯಲ್ಲಿ ನಡೆಯಲಿದೆ ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ ಪ್ರಕಟ

ಬೆಳಗಾವಿ: ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಿರ್ಣಾಯಕವಾದ ಸಾಮಾನ್ಯ ಪ್ರವೇಶ ಪರೀಕ್ಷೆ  ರಾಜ್ಯಾದ್ಯಂತ ನಾಳೆಯಿಂದ ಪ್ರಾರಂಭವಾಗಲಿದೆ.

ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಬೆಳಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಸಲ ಒಟ್ಟು 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ  ಅವರು ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಕೆಲ ಮಾರ್ಗಸೂಚಿಗಳು ಹೀಗಿವೆ.

* ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ.
* ನೀಲಿ ಅಥವಾ ಕಪ್ಪು ಬಣ್ಣದ ಪೆನ್‌ ಮಾತ್ರ ಬಳಸತಕ್ಕದ್ದು.
* ತುಂಬು ತೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ.
* ಮೊಬೈಲ್‌, ಬ್ಲೂಟೂತ್‌, ಟ್ಯಾಬ್ಲೆಟ್‌, ಕೈಗಡಿಯಾರ, ಕ್ಯಾಲುಕುಲೇಟರ್‌, ನೋಟ್ ಪ್ಯಾಡ್‌, ಐ-ಪಾಡ್‌, ಇಯರ್‌ ಫೋನ್‌ ಇತ್ಯಾದಿಗಳನ್ನು ತರುವಂತಿಲ್ಲ.
* ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ.
* ಓಎಂಆರ್‌ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್‌ ಕೋಡ್‌ ನಮೂದಿಸುವುದು ಕಡ್ಡಾಯ.
* ಓಎಂಆರ್‌ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು.
* ಓಎಂಆರ್‌ ಶೀಟ್‌ನಲ್ಲಿರುವ ಟೈಮಿಂಗ್‌ ಮಾರ್ಕ್‌ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.//////