Belagavi News In Kannada | News Belgaum

ಮತದಾನ ಜಾಗೃತಿ, ವಿಕಲಚೇತನರ ಬೈಕ್ ಜಾಥಾಗೆ ಚುನಾವಣಾಧಿಕಾರಿ ರಾಹುಲ ಶಿಂಧೆ ಚಾಲನೆ

ಬೆಳಗಾವಿ:  ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07 ರಂದು ಜರುಗಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸಧೃಡ ರಾಷ್ಟ್ರ ನಿರ್ಮಾಣ ಮಾಡಲು ಮುಂದಾಗ ಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಅವರು ಕರೆ ನೀಡಿದರು.

ಚಿಕ್ಕೋಡಿ ತಾ.ಪಂ. ಕಚೇರಿ ಆವರಣದಲ್ಲಿ ಶನಿವಾರ (ಏ.20) ರಂದು ಮತದಾನ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದÀರು, ಅರ್ಹ ಮತದಾರರು ತಪ್ಪದೇ ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ. ಹಾಗಾಗಿ ಎಲ್ಲರೂ ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದರು.
ದೇಶದಲ್ಲಿ ಉತ್ತಮ ಆಡಳಿತ ವ್ಯವಸ್ಥೆ ಹೊಂದಲು ಮತದಾರರ ಪಾತ್ರ ತುಂಬ ಮಹತ್ವದಾಗಿರುತ್ತದೆ. ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ದಿನದಂದು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು. ಎಂಭೈತ್ತೈದು ವರ್ಷ ಮೇಲ್ಪಟ್ಟ ವಯೋವೃದ್ಧರಿಗಾಗಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ಮೇ. 7 ರಂದು ಜರುಗಲಿರುವ ಮತದಾನದ ದಿನದಂದು ಅರ್ಹ ಮತದಾರರೆಲ್ಲರೂ ಉದಾಸೀನ ಮನೋಭಾವ ತೋರದೆ ತಮ್ಮ ವ್ಯಾಪ್ತಿಯಲ್ಲಿನ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವದರ ಜೊತೆಗೆ ತಮ್ಮ ಅಕ್ಕ, ಪಕ್ಕದವರಿಗೂ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿ ಮತ ಚಲಾಯಿಸಲು ಪ್ರೆರೇಪಿಸಬೇಕು.

ಮತದಾನದ ದಿನದಂದು ಮತಗಟ್ಟೆಗಳಲ್ಲಿ ಕುಡಿಯುವ ನೀರು, ಕಾಯುವಿಕೆ ಸ್ಥಳ ಸೇರಿದಂತೆ ಅಗತ್ಯದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅರ್ಹ ಮತದಾರರೆಲ್ಲರೂ ಮತದಾನದ ದಿನದಂದು ತಪ್ಪದೇ ಮತಗಟ್ಟೆಗಳಿಗೆ ಆಗಮಿಸಿ ಭಾರತದ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಕರೇ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ರಾಯಭಾರಿ ರಾಘವೇಂದ್ರ ಅನ್ವೇಕರ, ಜಿ.ಪಂ ಯೋಜನಾ ನಿರ್ದೆಶಕ ಕೃಷ್ಣರಾಜ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಗಂಗಮ್ಮ ಹಿರೇಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ವಿಕಲಚೇತನರು ಉಪಸ್ಥಿತರಿದ್ದರು.
ಚಿಕ್ಕೋಡಿ ತಾ.ಪಂ.ಇ.ಓ.ಜಗದೀಶ ಕಮ್ಮಾರ ಅವರು ಮತದಾನ ಜಾಗೃತಿ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಾನಪದ ಕಲಾತಂಡಗಳೊಂದಿಗೆ ತಾಲೂಕು ಪಂಚಾಯತ ಆವರಣದಿಂದ ಪ್ರಾರಂಭಗೊಂಡು ಬೈಕ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.//////