Belagavi News In Kannada | News Belgaum

ಜಗದೀಶ್ ಶೆಟ್ಟರ್ ಬಲಿಕಾ ಬಕ್ರ ಎಂದ ಶಾಸಕ ಸವದಿ

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಸಲುವಾಗಿಯೇ ಬೆಳಗಾವಿಗೆ ತಂದು ನಿಲ್ಲಿಸಲಾಗಿದೆ. ಜಗದೀಶ್ ಶೆಟ್ಟರ್ ಬಲಿಕಾ ಬಕ್ರ ಅಗಲಿದ್ದಾರೆ. ಇದೇ ರೀತಿ ಬಿಜೆಪಿ 4-5 ಕ್ಷೇತ್ರಗಳಲ್ಲಿ ಬಕ್ರಾಗಳನ್ನು ತಂದು ನಿಲ್ಲಿಸಿದೆ ಎಂದು  ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು.

ರಾಮದುರ್ಗ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ನಡೆದ ಬೃಹತ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಗರು ಮಾತು‌ ಆಡಿದರೆ ಸಾಕು ಬರೀ ಸುಳ್ಳೇ ಆಡುತ್ತಾರೆ. ಸುಳ್ಳಿನಿಂದಲೇ ಅರಮನೆ ಕಟ್ಟಿ,  2014ರಿಂದ ಅಧಿಕಾರ ನಡೆಸುತ್ತಿದ್ದಾರೆ. ನಮ್ಮ ಮಣ್ಣು ನಮ್ಮ ಹಕ್ಕು ಎಂದು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ್ದರು‌. ಅದೇ ರೀತಿ ನಮ್ಮ ಜಿಲ್ಲೆಗೆ ಹೊರ ಜಿಲ್ಲೆಯ ಅಭ್ಯರ್ಥಿ ಬೇಡ. ಮೋದಿ, ಬಿಎಸ್ ವೈ ಪ್ರಚಾರ ಮಾಡಿದ ಜಾಗಗಳಲ್ಲಿ ಬಿಜೆಪಿ ಸೋತಿದೆ. ಬೆಳಗಾವಿಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ ಎಂದು ಭವಿಷ್ಯ ನುಡಿದರು.

2014ರ ಚುನಾವಣೆ ವೇಳೆ ಮಾಜಿ ಪ್ರಧಾನಿ ವಾಜಪೇಯಿ ಕನಸು ನನಸಾಗಬೇಕು, ಗಂಗಾನದಿಯ ನೀರನ್ನು ಕಾವೇರಿಗೆ ತರಬೇಕು. ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತರ್ತಿವಿ. ಆ ಹಣ ತಂದರೆ ಎಲ್ಲರ ಅಕೌಂಟಿಗೆ 15 ಲಕ್ಷ ಹಾಕಬಹುದು. ನಮ್ಮೂರ ರಸ್ತೆಗಳು ಚಿನ್ನದ ರಸ್ತೆಗಳನ್ನಾಗಿ ಮಾಡಬಹುದು ಎಂದೆಲ್ಲಾ ಸುಳ್ಳು ಹೇಳಿಕೊಂಡು ಅಧಿಕಾರಕ್ಕೇರಿದರು. ಬಿಜೆಪಿಯವರು ಹೇಳಿದ್ದನ್ನು ಯಾವುದನ್ನೂ ಮಾಡುವುದಿಲ್ಲ. ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೀವಿ ಎಂದು ಹೇಳಿದ್ದರು‌. ಆದರೆ ಈಗ ರೈತರ ಆದಾಯ ಡಬಲ್‌ ಆಗಲಿಲ್ಲ. ಬದಲಿಗೆ ಅವರು ಬಳಸುವ ರಾಸಾಯನಿಕ ಗೊಬ್ಬರದ ಮೊತ್ತ ಡಬಲ್ ಆಗಿದೆ ಎಂದು ಆರೋಪಿಸಿದರು.//////