Belagavi News In Kannada | News Belgaum

ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ನಾಳೆ ಚಿಕ್ಕೋಡಿಗೆ

 

ಬೆಳಗಾವಿ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ-02 ಚುನಾವಣಾ ಪ್ರಚಾರ ಸಭೆ ಮೇ.4ರಂದು ಮಧ್ಯಾಹ್ನ 4:30ಕ್ಕೆ ಚಿಕ್ಕೋಡಿ ಆರ್.ಡಿ. ಹೈಸ್ಕೂಲ್‌ ಮೈದಾನದಲ್ಲಿ ಜರುಗಲಿದ್ದು,ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗಮಿಸಲಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷಣರಾವ್‌ ಚಿಂಗಳೆ ಅವರು, ‘ಅಂದು ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಪ್ರಚಾರಾರ್ಥ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಚಿಕ್ಕೋಡಿ ಜಿಲ್ಲೆಯ ಜಿಲ್ಲಾ ವ್ಯಪ್ತಿಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್‌ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್‌ ಪಧಾಧಿಕಾರಿಗಳು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ-ಪುರಸಭೆ, ಪಟ್ಟಣ ಪಂಚಾಯತ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಪಂ ಹಾಲಿ ಹಾಗೂ ಮಾಜಿ ಅಧ್ಯಕ್ಷರು-ಉಪಾಧ್ಯಕ್ಷರು ಮತ್ತು ಸದಸ್ಯರು ಎಲ್ಲ ಮುಖಂಡರು ಸೇರಿದಂತೆ ಎಲ್ಲ ಕಾಂಗ್ರೆಸ್‌ ಕ್ರಾಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕು ಎಂದು ತಿಳಿಸಿದ್ದಾರೆ.