Belagavi News In Kannada | News Belgaum

ಣ್ಯರು ರಾಜಕೀಯ ನಾಯಕರು ತಮ್ಮ ಹಕ್ಕು ಚಲಾಯಿಸುವ ಮೂಲಕ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಕರೆ ನೀಡಿದ್ದರು

ಬೆಳಗಾವಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಬೆಳಗಾವಿ ಲೋಸಕಭಾ ಹಾಗೂ ಚೊಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಬೆಳಗ್ಗೆಯಿಂದಲೇ ಭರ್ಜರಿ ಮತದಾನ ನಡೆಯುತ್ತಿದೆ. ಈ ಎರಡು ಲೋಕಸಭಾ ವ್ಯಾಪ್ತಿಯಲ್ಲಿ ಗಣ್ಯರು ರಾಜಕೀಯ ನಾಯಕರು ತಮ್ಮ ಹಕ್ಕು ಚಲಾಯಿಸುವ ಮೂಲಕ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಅವರು ತಮ್ಮ ಪತ್ನಿ ಜೊತೆ ಹೋಗಿ ತಮ್ಮ ಹಕ್ಕು ಚಲಾಯಿಸಿದ್ದಾರೆ.‌ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಸಂಸದೆ ಮಂಗಳ ಅಂಗಡಿ ಹಾಗೂ ಕುಟುಬಂಸ್ಥರು ಬೆಳಗಾವಿಯ ವಿಶ್ವೇಶ್ವರ ನಗರದಲ್ಲಿ ಮತದಾನ ಮಾಡಿದ್ದಾರೆ. ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ ಸೇರಿದಂತೆ ಬೆಳಗಾವಿ ನಗರದಲ್ಲಿ ಉದ್ಯಮೀಗಳು, ಕಾರ್ಮಿಕರು ಸೇರಿದಂತೆ ಅನೇಕ ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ.‌