Belagavi News In Kannada | News Belgaum

ವಸತಿ ಶಾಲೆಗಳಲ್ಲಿ ವಿಕಲಚೇತನ ಮಕ್ಕಳ ದಾಖಲಾತಿಗಾಗಿ ಶೆ. 10% ಮೀಸಲಾತಿ

ಬೆಳಗಾವಿ.ಮೇ.14 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ನಿಗದಿಡಿಸಲಾಗಿದೆ. ಜಿಲ್ಲೆಯಲ್ಲಿರುವ ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್.ಐ.ವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧೀ, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಬೆಳಗಾವಿ ಇವರನ್ನು ದೂರವಾಣಿ 8050609098 ಸಂಖ್ಯೆಗೆ ಸಂಪರ್ಕಿಸಬಹುದಾಗಿರುತ್ತದೆ ಎಂದು ಬೆಳಗಾವಿಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ