Belagavi News In Kannada | News Belgaum

ವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್‌ ಡೆತ್‌ ಪ್ರಕರಣ ಸಂಬಂಧ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅಮಾನತುಗೊಂಡಿದ್ದಾರೆ.

 

ಮೂವರು ಅಧಿಕಾರಿಗಳನ್ನ ಸೇವೆಯಿಂದ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ.
ಮೇ 24 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿದ್ದ ಆದಿಲ್ ಎಂಬ ಯುವಕ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡಿ, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಹೇಳಿದ್ದರು. ನಂತರ ಸಂಬಂಧಿಕರು, ಸ್ಥಳೀಯರು ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. ಹೀಗಾಗಿ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.