Belagavi News In Kannada | News Belgaum

ಅಧಿಕೃತ ಆದೇಶ ಪ್ರತಿ ಸ್ವೀಕರಿಸಿದ ನೂತನ ಸಂಸದೆಗೆ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ನೂತನ ಸಂಸದೆಯಾಗಿ ಪ್ರಿಯಂಕಾ ಜಾರಕಿಹೊಳಿ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಚಿಕ್ಕೋಡಿ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು ಅಧಿಕೃತ ಆದೇಶ ಪ್ರತಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕರಾದ ಗಣೇಶ ಹುಕ್ಕೇರಿ, ಆಸೀಫ್ ( ರಾಜು ) ಸೇಠ್, ಬೆಳಗಾವಿ ಬೂಡಾ ಅಧ್ಯಕ್ಷ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಯುವ ನಾಯಕ ರಾಹುಲ್ ಜಾರಕಿಹೊಳಿ ಇದ್ದರು..