Belagavi News In Kannada | News Belgaum

ಬಾಡಿಗೆ ವಿಚಾರಕ್ಕೆ ಪತ್ನಿ ಹತ್ಯೆಗೈದ ಪತಿ ಬಂಧನ

ಆನೇಕಲ್: ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದಿದ್ದ ಪತಿಯೊಬ್ಬನನ್ನು ಬಂಧಿಸಲಾಗಿದೆ.  ಗಂಗಿರೆಡ್ಡಿ ಬಂಧಿತ ಆರೋಪಿ.

ಮನೆ ಬಾಡಿಗೆ ಹಣ ಪಡೆಯುವ ವಿಚಾರಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದಲ್ಲಿ ಕಳೆದ 3ರಂದು ಹತ್ಯೆ ನಡೆದಿತ್ತು.

ಇತ್ತೀಚೆಗೆ ಗಂಗಿರೆಡ್ಡಿ ಬಾಡಿಗೆ ಹಣ ಪಡೆದು ಆ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ. ಹೀಗಾಗಿ ಸುಜಾತ ಮನೆ ಬಾಡಿಗೆ ಹಣವನ್ನು ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದಳು. ಇತ್ತ ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಸುಜಾತ ಮೇಲೆ ಗಂಗಿರೆಡ್ಡಿ ಶೀಲ ಶಂಕಿಸಿದ್ದ. ಇಬ್ಬರ ನಡುವೆ ದಿನನಿತ್ಯ ಗಲಾಟೆ ನಡೆಯುತ್ತಿತ್ತು.

ಕಳೆದ 3ರಂದು ಇಬ್ಬರ ನಡುವೆ ಜಗಳ ನಡೆದು ಮನೆಯಲ್ಲಿದ್ದ ಚಾಕುವಿನಿಂದ ಇರಿದು ಸುಜಾತಳನ್ನು ಕೊಂದು ಗಂಗಿರೆಡ್ಡಿ ಪರಾರಿ ಆಗಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.