Belagavi News In Kannada | News Belgaum

ಪತ್ನಿಯನ್ನು ಗುಂಡಿಕ್ಕಿ ಕೊಂದು ನೇಣಿಗೆ ಶರಣಾದ ಪತಿ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡು ಪತಿಯೊಬ್ಬ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಘಟನೆ ನಡೆದಿದೆ..

ಹರೀಶ್ (50) ಎಂಬಾತ ಪತ್ನಿ ಜಾಜಿ (45) ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಹರೀಶ್‌ ಹಾಗೂ ಜಾಜಿ ನಡುವೆ ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿದೆ. ಈ ವೇಳೆ ಸಿಟ್ಟಾದ ಹರೀಶ್‌ ಮನೆಯಲ್ಲಿದ್ದ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಜಾಜಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೂ ಈ ದಂಪತಿಗೆ ಮೂವರು ಮಕ್ಕಳಿದ್ದು, ಬೇರೆಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ..