Belagavi News In Kannada | News Belgaum

ಅರ್ಜಿ ಆಹ್ವಾನ

ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಜುಲೈ 2 ರಂದು ಚುನಾವಣೆ

ಬೆಳಗಾವಿ ಜೂ.24: ಬೆಳಗಾವಿ ಮಹಾನಗರ ಪಾಲಿಕೆಯ 22ನೇ ಅವಧಿಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸಲು ಜುಲೈ 02 ರಂದು ಚುನಾವಣೆ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆಯ ಅಧ್ಯಕ್ಷಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಾದ ಎಸ್. ಬಿ. ಶೆಟ್ಟೆಣ್ಣವರ ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಜುಲೈ 2 ರಂದು ಬೆಳಗ್ಗೆ 10 ರಿಂದ 12 ಘಂಟೆ ವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಪಪತ್ರಗಳ ಸ್ವೀಕೃತಿ ನಡೆಯಲಿದೆ.
ಮಧ್ಯಾಹ್ನ 3 ಘಂಟೆಗೆ ಚುನಾವಣೆಯ ಪ್ರಕ್ರಿಯೆ ಸಭೆ ನಡೆಯಲಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆಯ ಅಧ್ಯಕ್ಷಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಾದ ಎಸ್. ಬಿ. ಶೆಟ್ಟೆಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ: ಅರ್ಜಿ ಆಹ್ವಾನ

ಬೆಳಗಾವಿ ಜೂ.24 : ಪ್ರಸಕ್ತ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಇಖಿ/ಓಇಇಖಿ ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಅರಿವು ಸಾಲ ಯೋಜನೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ದ, ಸಿಖ್ಖರು, ಪಾರ್ಸಿ ವಿದ್ಯಾರ್ಥಿಗಳು ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ಮೂಲಕ ಜುಲೈ 7 ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ ಕೆ.ಎಸ್.ಸಿ.ಎ. ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ, ರಾಮತೀರ್ಥ ನಗರ ಕಚೇರಿಗೆ ಅಥವಾ ಕಚೇರಿಯ ದೂರವಾಣಿ: 0831-2950794 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಜಿಲ್ಲಾ ವ್ಯವಸ್ಥಾಪಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಕೆ.ಎ.ಆರ್-ಟಿ.ಇ.ಟಿ ಪರೀಕ್ಷೆ: ನಿಷೇದಾಜ್ಞೆ ಜಾರಿ

ಬೆಳಗಾವಿ ಜೂ.24 : ಕೆ.ಎ.ಆರ್-ಟಿ.ಇ.ಟಿ ಪರೀಕ್ಷೆಗಳು ಜೂ.30 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 4.30 ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸದರಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 200ಮೀ. ಒಳಗಿನ ಝೆರಾಕ್ಸ್ ಅಂಡಿಗಳನ್ನು ಬಂದ ಇಡತಕ್ಕದ್ದು, ಪರೀಕ್ಷೆಯಲ್ಲಿ ಭಾಗವಹಿಸುತ್ತಿರುವ ಮಕ್ಕಳಿಗೆ ನಕಲು ಮಾಡಲು ಸಹಾಯ ಮಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಹತ್ತಿರ ಬರುವುದನ್ನು, ಸರ್ಕಾರಿ ಬಸ್ಸು ಹಾಗೂ ಇತರೆ ವಾಹನಗಳಿಗೆ ಅಡೆತಡೆ ಉಂಟುಮಾಡುವುದನ್ನು, ವಿದ್ಯಾರ್ಥಿಗಳು, ಶಾಲಾ/ಕಾಲೇಜು ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀ¯ ಅವರು ಆದೇಶದಲ್ಲಿ ತಿಳಿಸಿದ್ದಾರೆ.////

ದ್ವಿತೀಯ ಪಿಯುಸಿ ಪರೀಕ್ಷೆ: ನಿಷೇದಾಜ್ಞೆ

ಬೆಳಗಾವಿ ಜೂ.24: ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಜೂ.24 ರಿಂದ ಜುಲೈ 5 ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಯ ಸಮಯದಲ್ಲಿ ಯಾವುದೇ ರೀತಿಯ ಲೋಪದೋಷ, ಅವ್ಯವಹಾರಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಲುವಾಗಿ ಹಾಗೂ ಪರೀಕ್ಷೆ ಪಾವಿತ್ರ್ಯತೆಯನ್ನು ಕಾಯುವ ಉದೇಶದಿಂದ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಸಿ.ಆರ್.ಪಿ.ಸಿ.1973 ಕಲಂ144ರನ್ವಯ 23 ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಸದರಿ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಸಭೆ, ಮೆರವಣಿಗೆ ಮಾಡುವುದು, ಆಯುಧ, ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು ತೆಗೆದುಕೊಂಡು ತಿರುಗಾಡುವುದನ್ನು, 23 ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯ ಒಳಗಿನ ಝೆರಾಕ್ಸ್ ಅಂಗಡಿಗಳನ್ನು ಬಂದ ಇಡುವಂತೆ ಹಾಗೂ ವಿದ್ಯಾರ್ಥಿಗಳು, ಶಾಲಾ/ಕಾಲೇಜು ಸಿಬ್ಬಂದಿಗಳು, ಸರ್ಕಾರಿದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರಿಕ್ಷಾ ಕೇಂದ್ರಗಳಿಗೆ ಮಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಶಾಲಾ/ಕಾಲೇಜಿನ ಆವರಣದಲ್ಲಿ ಪ್ರವೇಶವನ್ನು ನಿಷೇದಿಸಲಾಗಿದೆ ಎಂದು ದಂಡಾಧಿಕಾರಿಗಳಾದ ನಿತೇಶ ಪಾಟೀಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.////