Belagavi News In Kannada | News Belgaum

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಬೆಳಗಾವಿ ಜು.02 : ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಗಳಾದ ಬಿಸಿಎಂ ಹಾಗೂ ಡಿಟಿ ಬೈಲಹೊಂಗಲ, ನಯಾನಗರ, ದೊಡವಾಡ, ಕಿತ್ತೂರ, ಸಂಪಗಾವಿ, ಬೈಲವಾಡ, ನೇಸರಗಿ, ದೇಶನೂರ, ಹುಣಶೀಕಟ್ಟಿ, ತುರಕರಶೀಗಿಹಳ್ಳಿ ಹಾಗೂ ಬೈಲಹೊಂಗಲದ ಒಟ್ಟು 12 ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ. ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರವರ್ಗ-1, 2ಎ,2ಬಿ,3ಎ,3ಬಿ, ಪ.ಪಂ/ಪಪಂ ಹಾಗೂ ಇತರೆ ಜನಾಂಗಕ್ಕೆ ಸೇರಿದವರಾಗಿರಬೇಕು.ಪ್ರವರ್ಗ-1.ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳ ಪೊಷಕರ ಆದಾಯ 1 ಲಕ್ಷ ಮಿರಿರಬಾರದು. ಪ್ರವರ್ಗ-2,2ಎ,2ಬಿ,3ಎ,3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳ ಪೊಷಕರ ಆದಾಯ 44,500 ಮಿರಿಬಾರದು.
ಆಸಕ್ತ ವಿದ್ಯಾರ್ಥಿಗಳು ಜುಲೈ 10 ರೊಳಗಾಗಿ ಇಲಾಖೆಯ ವೆಬ್‍ಸೈಟ್ https://shp.karnataka.gov.in/bcwd ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತಾಲ್ಲೂಕವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳಿಗಾಗಿ https://bcwd.karnataka.gov.in ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು.ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದಲ್ಲಿ bcwdhelpline@gmil.com ಅಥವಾ ಜಿಲ್ಲಾ/ತಾಲ್ಲೂಕು ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿಗೆ ಸೂಕ್ತ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ; 8050770004/8050770005 ಸಂಖ್ಯಗೆ ಸಂಪರ್ಕಿಸಬಹುದು ಎಂದು ಬೈಲಹೊಂಗಲ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಬೆಳಗಾವಿ ಜು.02 : ಬೈಲಹೊಂಗಲ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಕಿಯರ ವಿದ್ಯಾರ್ಥಿನಿಲಯ ಹೊಸದಾಗಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಬೈಲಹೊಂಗಲ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಬೈಲಹೊಂಗಲ-1 ಬೈಲಹೊಂಗಲ-2 ಹಾಗೂ ಕಿತ್ತೂರ ಸೇರದಂತೆ ಒಟ್ಟು 4 ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ. ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಪಂ/ಪಪಂ ಹಾಗೂ ಇತರೆ ಜನಾಂಗಕ್ಕೆ ಸೇರಿದವರಾಗಿರಬೇಕು. ಪ್ರವರ್ಗ-1.ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳ ಪೊಷಕರ ಆದಾಯ 2.50 ಲಕ್ಷ ಮಿರಿರಬಾರದು. ಪ್ರವರ್ಗ-2,2ಎ,2ಬಿ,3ಎ,3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳ ಪೊಷಕರ ಆದಾಯ 1 ಲಕ್ಷ ಮಿರಿಬಾರದು.
ಆಸಕ್ತ ವಿದ್ಯಾರ್ಥಿಗಳು ಜುಲೈ 20 ರೊಳಗಾಗಿ ಇಲಾಖೆಯ ವೆಬ್‍ಸೈಟ್ https://shp.karnataka.gov.in/bcwd ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತಾಲ್ಲೂಕವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳಿಗಾಗಿ https://bcwd.karnataka.gov.in  ವೆಬ್‍ಸೈಟ್ ನಲ್ಲಿ ವೀಕ್ಷಿಸಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದಲ್ಲಿ bcwdhelpline@gmil.com ಅಥವಾ ಜಿಲ್ಲಾ/ತಾಲ್ಲೂಕು ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿಗೆ ಸೂಕ್ತ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ; 8050770004/8050770005 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಬೈಲಹೊಂಗಲ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.