Belagavi News In Kannada | News Belgaum

ಫಲಾನುಭವಿ ಆಧಾರಿತ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ ಜು.02 : ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರಯೋಜನೆ, ಪುನರ್ವಸತಿಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆಯೋಜನೆ, ಪ್ರತಿಭೆಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್‍ಯೋಜನೆ, ದೈಹಿಕ ವಿಕಲಚೇತನರಿಗೆಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಹೊಲಿಗೆ ಯಂತ್ರಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್‍ಕಿಟ್ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‍ಲೈನ್ ಸೇವಾ ಸಿಂಧು (ಪೋರ್ಟಲ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿes  https://sevasindhu.karnataka.gov.in/Sevasindhu/DepartmentServices  ಸೇವಾ ಸಿಂಧು ವೆಬ್‍ಸೈಟ್ ಮೂಲಕ ಅಗಸ್ಟ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಹಾರ್ಡ ಪ್ರತಿಯೊಂದಿಗೆ ದ್ವಿ ಪ್ರತಿಯಲ್ಲಿ ಅರ್ಜಿಯನ್ನು ಆಯಾ ತಾಲೂಕು ಪಂಚಾಯತಿ ಕಛೇರಿಗಳಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 0831-2476096/7 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.