Belagavi News In Kannada | News Belgaum

ಸಂಭ್ರಮದ ಆಚರಣೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ

ಜು.20 ರಂದು ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಬೆಳಗಾವಿ ಜುಲೈ.11: ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜು.20 ರಂದು ಸಂಭ್ರಮ, ಸಡಗರದಿಂದ ಆಚರಿಸಲು ಅಗತ್ಯದ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಜು.11) ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆಗೆ ಅವಶ್ಯವಿರುವ ರೂಪರೇμÉಗಳ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಆಯೋಜಿಸಲು ತಿಳಿಸಿದರು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸುವಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸುವದರ ಜೊತೆಗೆ ಆಮಂತ್ರಣ ಪತ್ರಿಕೆಗಳನ್ನು ಸಾಕಷ್ಟು ಮುಂಚಿತವಾಗಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿ, ಗಣ್ಯರುಗಳಿಗೆ ತಲುಪಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡುವ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ, ಪುರಸ್ಕಾರ, ಸನ್ಮಾನ ಮುಂತಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮೆರವಣಿಗೆ ಕಾರ್ಯಕ್ರಮ: ಶಿವಶರಣ ಹಡಪದ ಅಪ್ಪಣ ಜಯಂತಿ ಅಂಗವಾಗಿ ಕೋಟೆ ಕೆರೆಯಿಂದ ನಗರದ ಕುಮಾರ ಗಂಧರ್ವ ಕಲಾಮಂದಿರದ ವರೆಗ ಮೆರವಣಿಗೆ ನಡೆಸಲು ಸಭೆಯಲ್ಲಿ ಚರ್ಚಿಸಿ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸುವಂತೆ ಕ್ರಮ ಜರುಗಿಸಲು ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಅವರು ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯ ಕಾರ್ಯಕ್ರಮದ ರೂಪರೇμÉಗಳ ಸಿದ್ಧತೆ ಕುರಿತು ವಿವರಿಸಿದರು.
ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಹಡಪದ ಸಮಾಜದ ಮುಖಂಡರುಗಳಾದ ಮಲ್ಲೇಶ ನಾವಿ, ಮಹಾಂತೇಶ ಹಂಪಣ್ಣವರ, ಮಹೇಶ ತೋರೆ, ರಾಜು ನಾವಿ, ಅಶೋಕ ಹಡಪದ, ಪ್ರಕಾಶ ಹಂಪಣ್ಣವರ, ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.