ಬಯಲು ಶೌಚಮುಕ್ತ ಜಿಲ್ಲೆಗೆ ಎಲ್ಲರೂ ಕೈಜೋಡಿಸಿ – ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ

All join hands to the Plainfield district - Regional Commissioner PA Meghanna's

ಫೆ.19 ರೊಳಗಾಗಿ 40 ಸಾವಿರ ಶೌಚಾಲಯಗಳನ್ನು ನಿರ್ಮಿಸಲು ಕಾರ್ಯಾದೇಶ ಬಯಲು ಶೌಚಮುಕ್ತ ಜಿಲ್ಲೆಗೆ ಎಲ್ಲರೂ ಕೈಜೋಡಿಸಿ
– ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ

News Belgaum-ಕುಡಿಯುವ ನೀರಿನ ತೊಂದರೆ ಹಾಗೂ ಶೌಚಾಲಯಗಳನ್ನು ನಿರ್ಮಿಸದಿದ್ದರೇ ಶಿಸ್ತು ಕ್ರಮ: ಮೇಘಣ್ಣವರ ಎಚ್ಚರಿಕೆ
ಬೆಳಗಾವಿ:( news belgaum) ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಶೌಚಾಲಯಗಳನ್ನು ಫೆ.19 ರೊಳಗಾಗಿ ನಿರ್ಮಿಸಬೇಕೆಂದು ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ (ಫೆ.9) ಏರ್ಪಡಿಸಿದ್ದ ಸ್ವಚ್ಛಭಾರತ ಮಿಷನ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯನ್ನು ಬಯಲು ಶೌಚಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಎಲ್ಲ ಕುಟುಂಬಗಳು ಶೌಚಾಲಯ ನಿರ್ಮಾಣ ಮಾಡಿಕೊಂಡು, ಅವುಗಳನ್ನು ಪ್ರತಿದಿನ ಬಳಸಿದಾಗ ಮಾತ್ರ ಬಯಲು ಶೌಚಮುಕ್ತ ಎಂಬ ಪರಿಕಲ್ಪನೆ ಸಾಕಾರವಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯತ ಅಧಿಕಾರಿಗಳ ಜೊತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯ ಸಿಬ್ಬಂದಿಯೂ ಸಹ ಜನರಲ್ಲಿ ಶೌಚಾಲಯಗಳ ಕುರಿತು ಇನ್ನು ಹೆಚ್ಚಿನ ರೀತಿಯಲ್ಲಿ ಜಾಗೃತಿಯನ್ನು ಮೂಡಿಸಿ, ಶೌಚಾಲಯಗಳನ್ನು ಬಳಸುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಕೇವಲ ಕಾಗದ ಪತ್ರಗಳಲ್ಲಿ, ಅಂಕಿ, ಸಂಖ್ಯೆಯಲ್ಲಿ ಪ್ರಗತಿಯನ್ನು ತೋರಿಸಿದರೆ ಸಾಲದು, ಕೆಲಸದಲ್ಲಿ ನಿಜವಾದ ಪ್ರಗತಿಯಾಗಿರಬೇಕು. ಫೆ.19 ರೊಳಗಾಗಿ ಜಿಲ್ಲೆಯಲ್ಲಿ 40 ಸಾವಿರ ಶೌಚಾಲಯಗಳನ್ನು ನಿರ್ಮಿಸಲು ಕಾರ್ಯಾದೇಶ ನೀಡಿ ಎಂದು ಸೂಚಿಸಿದರು.
ಶಾಲೆಗಳಲ್ಲಿ ನಿರ್ಮಿಸಿರುವ ಶೌಚಾಲಯಗಳು ಬಳಕೆಯಾಗದೇ ದುಸ್ಥಿತಿಗೆ ತಲುಪಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಿ, ಶಾಲೆಗಳಲ್ಲಿ ಶೌಚಾಲಯಗಳು ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಅನೇಕ ಶಾಲೆಗಳಲ್ಲಿ ಶೌಚಾಲಯಗಳನ್ನು ಬಳಸಲು ನೀರಿನ ಸಮಸ್ಯೆ ಹಾಗೂ ಶಾಲೆಗೆ ಕಂಪೌಂಡಗಳು ಇರುವುದಿಲ್ಲ. ಅಂತಹ ಶಾಲೆಗಳಿಗೆ ಜಿಲ್ಲಾ ಪಂಚಾಯತ, ಗ್ರಾಮ ಪಂಚಾಯತ ಅಧಿಕಾರಿಗಳು ಹಾಗೂ ಇನ್ನಿತರ ಇಲಾಖೆಗಳ ಸಿಬ್ಬಂದಿ ಭೇಟಿ ನೀಡಿ, ಶಾಲೆಯ ಎಸ್‍ಡಿಸಿಎಂಸಿಯನ್ನು ಗಮನಕ್ಕೆ ತೆಗೆದುಕೊಂಡು ಆ ಗ್ರಾಮದಲ್ಲಿರುವ ಶಿಕ್ಷಣ ಪ್ರೇಮಿಗಳು ಅಥವಾ ದಾನಿಗಳನ್ನು ಸಂಪರ್ಕಿಸಿ ಶಾಲೆಗೆ ನೀರು ಹಾಗೂ ಕಂಪೌಂಡ ಕಟ್ಟುವ ವ್ಯವಸ್ಥೆಯನ್ನು ಮಾಡಬಹುದು ಎಂದು ಸಲಹೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದ್ದು, ಆಶಾ ಕಾರ್ಯಕರ್ತೆಯರು ಮೊದಲು ತಾವು ತಮ್ಮ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್ ಅವರು ಮಾತನಾಡಿ, ಸ್ವಚ್ಛಭಾರತ ಮಿಷನ್ ಯಶಸ್ವಿಗೊಳಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕಾರ್ಯಕ್ರಮಗಳ ಕುರಿತು ತಿಳಿಸಿದರು.
ಸ್ವಚ್ಛಭಾರತ ಮಿಷನ್ ಅಡಿ ಪ್ರಗತಿಯನ್ನು ಸಾಧಿಸದೇ ಇರುವ ಜಿಲ್ಲೆಯ 213 ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು, ನಂತರದ ದಿನಗಳಲ್ಲಿ ಬಹುತೇಕ ಗ್ರಾಮಗಳಲ್ಲಿ ಪ್ರಗತಿ ಚೆನ್ನಾಗಿ ನಡೆದಿದೆ. ಚಿಕ್ಕೋಡಿ ಹಾಗೂ ಗೋಕಾಕ ತಾಲೂಕಿನ ಐದು ಗ್ರಾಮ ಪಂಚಾಯತಗಳಲ್ಲಿ ಮಾತ್ರ ಸರಿಯಾದ ಪ್ರಗತಿ ನಡೆಯುತ್ತಿಲ್ಲ ಎಂದು ಹೇಳಿದರು.
ಫೆ.19 ರೊಳಗಾಗಿ ಜಿಲ್ಲೆಯಲ್ಲಿ 40 ಸಾವಿರ ಶೌಚಾಲಯಗಳನ್ನು ನಿರ್ಮಿಸಲು ಕಾರ್ಯಾದೇಶ ನೀಡಲಾಗುವುದು ಎಂದು ರಾಮಚಂದ್ರನ್ ಅವರು ತಿಳಿಸಿದರು. ರಾಮಚಂದ್ರನ್ ಅವರು ಕೈಗೊಂಡಿರುವ ಕ್ರಮಗಳು ಹಾಗೂ ಅವರ ಕಾರ್ಯಗಳ ಕುರಿತು ಪ್ರಾದೇಶಿಕ ಆಯುಕ್ತರಾದ ಮೇಘಣ್ಣವರ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ತೊಂದರೆ ಹಾಗೂ ಶೌಚಾಲಯಗಳನ್ನು ನಿರ್ಮಿಸದಿದ್ದರೇ ಶಿಸ್ತು ಕ್ರಮ: ಮೇಘಣ್ಣವರ ಎಚ್ಚರಿಕೆ

ಚಿಕ್ಕೋಡಿ ಹಾಗೂ ಗೋಕಾಕ ತಾಲೂಕಿನ ಐದು ಗ್ರಾಮ ಪಂಚಾಯತಗಳಲ್ಲಿ ಸರಿಯಾದ ಪ್ರಗತಿ ನಡೆಯದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೇಘಣ್ಣವರ ಅವರು, ಫೆ.19 ರೊಳಗಾಗಿ ಆ ಗ್ರಾಮಗಳಲ್ಲಿ ಬಾಕಿ ಉಳಿದಿರುವ ಶೌಚಾಲಯಗಳನ್ನು ನಿರ್ಮಿಸದಿದ್ದರೇ ಸಂಬಂಧಪಟ್ಟ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ನೂಡಲ್ ಅಧಿಕಾರಿಗಳು ಹಾಗೂ ಪಿಡಿಒಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಕುರಿತು ವರದಿ ನೀಡಿ:
ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಯಾವ ರೀತಿಯಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಸರ್ಕಾರಕ್ಕೆ ವರದಿ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಅಧಿಕಾರಿಗಳು ಶೀಘ್ರವಾಗಿ ವರದಿ ನೀಡಬೇಕು ಎಂದು ತಿಳಿಸಿದರು.
ನೀರನ್ನು ಹಿತಮಿತವಾಗಿ ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನದಿ, ಕೆರೆಗಳ ನೀರನ್ನು ಸಂರಕ್ಷಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಸ್ಥರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ ಅವರು ಸ್ವಾಗತಿಸಿ, ನಿರೂಪಿಸಿದರು. ಜಿಲ್ಲೆಯ ಎಲ್ಲ ತಾಲೂಕು ಪಂಚಾಯತಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ನೂಡಲ್ ಅಧಿಕಾರಿಗಳು, ಪಿಡಿಒಗಳು ಸೇರಿದಂತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. All join hands to the Plainfield district – Regional Commissioner PA Meghanna’s

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Read Belgaum News & Updates for What’s Happening in Around You @ in News Belgaum Kannada News Portal.