before post

ಇವಿಎಂ-ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ

EVM -VV Pat Demonstration

0

ಬೆಳಗಾವಿ: (news belagavi)ಗ್ರಾಮ ಪಂಚಾಯತ ಡಾಟಾ ಎಂಟ್ರಿ ಆಪರೇಟರ್‍ಗಳು (ಗಣಕಯಂತ್ರ ನಿರ್ವಾಹಕರು) ಸರ್ಕಾರದ ವಿವಿಧ ಯೋಜನೆಗಳು ಯಶಸ್ವಿಯಾಗಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್ ಅವರು ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಏ.11) ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಗೋಕಾಕ, ಅಥಣಿ ಹಾಗೂ ರಾಯಬಾಗ ( ಆರು ತಾಲೂಕು) ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳ ಡಾಟಾ ಎಂಟ್ರಿ
ಆಪರೇಟರ್‍ಗಳಿಗಾಗಿ (ಗಣಕಯಂತ್ರ ನಿರ್ವಾಹಕರು) ಹಮ್ಮಿಕೊಂಡಿದ್ದ ಆಧಾರ್ ಕಾರ್ಡ್ ಎಂಟ್ರಿ ಹಾಗೂ ಆಧಾರ್ ಸಂಖ್ಯೆ ಜೋಡಣೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿವಿಧ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅವರ ಆಧಾರ ಸಂಖ್ಯೆಯನ್ನು ಜೋಡಣೆ ಮಾಡಿ ಫಲಾನುಭವಿಗಳಿಗೆ ಸೌಲಭ್ಯ ದೊರೆಯುವಂತೆ ಮಾಡುವಲ್ಲಿ ಡಾಟಾ ಎಂಟ್ರಿ ಆಪ್‍ರೇಟರಗಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಇವಿಎಂ-ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ:

News Belgaum-ಇವಿಎಂ-ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ 1

ಕಾರ್ಯಕ್ರಮದಲ್ಲಿ ಡಾಟಾ ಎಂಟ್ರಿ ಆಪರೇಟರ್‍ಗಳಿಗೆ ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆಯ ಬಗ್ಗೆ ಅರಿವು ಮೂಡಿಸಲಾಯಿತು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಮತಗಟ್ಟೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಅಥವಾ ಗೊಂದಲಗಳಾದರೆ ಕೈಗೊಳ್ಳಬೇಕಾದ ಕ್ರಮ ಹಾಗೂ ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು.
ವಿವಿಧ ತಾಲೂಕುಗಳ ಆಯ್ದ ಕೆಲವು ಡಾಟಾ ಎಂಟ್ರಿ ಆಪರೇಟರ್‍ಗಳು ಪ್ರಾಯೋಗಿಕವಾಗಿ ಮತದಾನ ಮಾಡಿ, ಇವಿಎಂ ಬಳಕೆಯ ಬಗ್ಗೆ ತಿಳಿದುಕೊಂಡರು.
ಮಹಾನಗರ ಪಾಲಿಕೆಯ ಆಯುಕ್ತರಾದ ಕೃಷ್ಟಗೌಡ ತಾಯಣ್ಣವರ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಮಾಸ್ಟರ್ ಟ್ರೈನರ್ ಎಸ್.ಎನ್. ಹೊಸಮನಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಗೋಕಾಕ, ಅಥಣಿ ಹಾಗೂ ರಾಯಬಾಗ (6 ತಾಲೂಕು) ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳ ನೂರಾರು ಡಾಟಾ ಎಂಟ್ರಿ ಆಪರೇಟರ್‍ಗಳು (ಗಣಕಯಂತ್ರ ನಿರ್ವಾಹಕರು) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.EVM -VV Pat Demonstration

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news