ಪೆಟ್ರೋಲ್ ಮತ್ತು ಡಿಸೆಲ್ ಮೇಲಿನ‌ ಅಬಕಾರ ಸುಂಕ ಕಡಿತಗೊಳಿಸುವ ಮಹತ್ವದ ನಿರ್ಧಾರ

news belagavi

0 154

ಪೆಟ್ರೋಲ್ ಮತ್ತು ಡಿಸೆಲ್ ಮೇಲಿನ‌ ಅಬಕಾರ ಸುಂಕ ಕಡಿತಗೊಳಿಸುವ ಮಹತ್ವದ ನಿರ್ಧಾರ

ನವದೆಹಲಿ: ಇಂಧನ ಬೆಲೆ ಪ್ರತೀ ದಿನ ಏರಿಕೆಯಾದರೂ ಸುಮ್ಮನಿದ್ದ ಕೇಂದ್ರ ಸರ್ಕಾರ ಇಂದು ಪೆಟ್ರೋಲ್ ಮತ್ತು ಡಿಸೆಲ್ ಮೇಲಿನ‌ ಅಬಕಾರ ಸುಂಕ ಕಡಿತಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಂದು ನಡೆದ ತುರ್ತು ಸಭೆಯಲ್ಲಿ ಪೆಟ್ರೋಲ್​ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2.50 ರೂಪಾಯಿಯಷ್ಟು ಇಳಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಹಾಗೆ ಕೇಂದ್ರ ಸರ್ಕಾರ 2.50 ರೂ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳೂ ಸಹ ಇಂಧನ ಸುಂಕವನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸುದ್ದಿಗೋಷ್ಠಿ ನಡೆಸಿ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ದಾಖಲೆ ಏರಿಕೆ ಕಂಡಿರುವ ಹಿನ್ನೆಲೆ ಕಳೆದ ನಾಲ್ಕು ವರ್ಷಗಳಲ್ಲಿ ಕಚ್ಛಾತೈಲ ದರ ದಾಖಲೆ ಏರಿಕೆಯಾಗಿದೆ ಎಂದು ಬೆಲೆ ಏರಿಕೆಯ ಕಾರಣ ತಿಳಿಸಿದರು.
ಕಚ್ಛಾತೈಲ ದರ ಏರಿಕೆಯಿಂದ ಜಾಗತಿಕ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದ್ದು, ಇದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂದರು. ತೈಲ ಬೆಲೆ ಇಳಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಹಣದುಬ್ಬರ ಪ್ರಮಾಣ ನಿಯಂತ್ರಣದಲ್ಲಿದೆ. ಪೆಟ್ರೋಲಿಯಂ ಮೇಲಿನ ಅಬಕಾರಿ ಸುಂಕ ರೂ. 2.50 ಇಳಿಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಣೆ ಮಾಡಿದರು.

ನಿಮ್ಮ ಅನಿಸಿಕೆ ಅಭಿಪ್ರಾಯ , ಸುದ್ದಿಗಳನ್ನು newsbelagavi@gmail.com ಗೆ ಕಳುಹಿಸಿ.

>>> News Belgaum – No.1 Kannada News Portal in Belagavi

ಜಾಹೀರಾತು , ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ : Mobile : 82175 55800