ಜೂನ್ 12, ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ

news belagavi

ಬೆಳಗಾವಿ,: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ವಿವಿಧ ಇಲಾಖೆಗಳು, ಕಾರ್ಮಿಕ ಸಂಘಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲಾ ಬಾಲಕಾರ್ಮಿಕ ಯೋಜನೆ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರು ಉದ್ಘಾಟಿಸುವರು. ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶಕುಮಾರ ಅವರು ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ವಿಜಯ ದೇವರಾಜ ಅರಸ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಧೀರಕುಮಾರ ರೆಡ್ಡಿ ಸಿ.ಎಚ್ ಅವರು ಉಪಸ್ಥಿತರಿರುವರು.

ಅತಿಥಿಗಳಾಗಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಇಬ್ರಾಹಿಂ ಮೈಗೂರು, ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಡಾ. ಎ.ಬಿ. ಪುಂಡಲೀಕ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ಎ.ಎಚ್, ಉಮೇಶ ಅವರಿಂದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರ ವಿಷಯ ಕುರಿತು ಉಪನ್ಯಾಸ ಮಂಡಿಸುವರು.

ಜಾಥಾ:
ಜಾಥಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಯವರ ಕಛೇರಿ ಆವರಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಜೆ. ಸತೀಶ ಸಿಂಗ್ ಅವರು ಉದ್ಘಾಟಿಸುವರು.
ಜಾಥಾವು ಜಿಲ್ಲಾಧಿಕಾರಿಯವರ ಕಛೇರಿ ಆವರಣದಿಂದ ಪ್ರಾರಂಭವಾಗಿ ಚನ್ನಮ್ಮ ವೃತ್ತ, ಅಂಬೇಡ್ಕರ ಉಧ್ಯಾನವನ, ಸದಾಶಿವ ನಗರ ಕ್ರಾಸ್, ಕೃಷ್ಣ ದೇವರಾಯ ವೃತ್ತದಿಂದ ಸಾಗಿ ಬಂದು ಕುಮಾರ ಗಂಧರ್ವ ಸಭಾಂಗಣಕ್ಕೆ ಮುಕ್ತಾಯಗೊಳ್ಳುತ್ತದೆ.////

Read Belgaum News & Updates for What’s Happening in Around You @ in News Belgaum Kannada News Portal.