30 ಶಾಲೆಗಳು, 450 ಶಿಕ್ಷಕರು, 10 ವಿದ್ಯಾರ್ಥಿಗಳಿಗೆ ಸನ್ಮಾನ:

30 schools, 450 teachers, 10 students honored:

30 ಶಾಲೆಗಳು, 450 ಶಿಕ್ಷಕರು, 10 ವಿದ್ಯಾರ್ಥಿಗಳಿಗೆ ಸನ್ಮಾನ:

ಚಿಕ್ಕೋಡಿ : (news belgaum)ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯ 8 ವಲಯಗಳ 450 ಶಿಕ್ಷಕರು, 30 ಶಾಲಾ ಆಡಳಿತ ಮಂಡಳಿ ಹಾಗೂ 10 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಿ ಸನ್ಮಾನಿಸಲಾಯಿತು.
ಪ್ರತಿಶತ ನೂರಕ್ಕೆ ನೂರರಷ್ಟು ಅಂಕ ಪಡೆದ ಚಿಕ್ಕೋಡಿ ವಿಭಾಗದ 30 ಶಾಲೆಗಳಿಗೆ ಸರ್ಕಾರದ ಅನುದಾನ ಹಾಗೂ ಎಸ್ಸೆಸ್ಸೆಲ್ಸಿ ಬೋರ್ಡ್ ವತಿಯಿಂದ ತಲಾ ರೂ. 10 ಸಾವಿರ ಚೆಕ್ ಹಾಗೂ ಧಾರವಾಡ ವಿಭಾಗದ ಶಿಕ್ಷಣ ಆಯುಕ್ತರು ನೀಡಿದ ಮಧ್ಯಾಂಕ ಸರಾಸರಿ ಪ್ರಮಾಣ ಪತ್ರಗಳನ್ನು ನೀಡಿ ಪುರಸ್ಕರಿಸಲಾಯಿತು.

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಗಳಿಸಿದ 10 ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆಯಲು ಪ್ರೇರೇಪಣೆ ನೀಡಿದ ಒಟ್ಟು 450 ಶಿಕ್ಷಕರಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅವರು ಕಾರ್ಯಕ್ರಮದ ಮುಕ್ತಾಯದವರೆಗೂ ಹಾಜರಿದ್ದು ಎಲ್ಲ ಶಿಕ್ಷಕರು, ಶಾಲೆಯ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಿ ಶಿಕ್ಷಕರರಿಂದ ಮೆಚ್ಚುಗೆ ಪಡೆದರು.
ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ರಾಜೀವ ನಾಯಕ, ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಪುಂಡಲೀಕ. ಎ.ಬಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲೀಕ ಅನವಾಲ, ನೂಡಲ್ ಅಧಿಕಾರಿ ಕೆ.ಎಚ್. ಹುದ್ದಾರ ಸೇರಿದಂತೆ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Read Belgaum News & Updates for What’s Happening in Around You @ in News Belgaum Kannada News Portal.