ಬೆಳಗಾವಿಗೆ ಕಾಂಗ್ರೆಸ್ ನಾಯಕರ ದಂಡು

Belgaum is a Congress party

ಬೆಳಗಾವಿ:-(news belgaum) ಬೆಳಗಾವಿ ದಕ್ಷಿಣ ಹಾಗೂ ಖಾನಾಪೂರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರ ದಂಡು  ಬೆಳಗಾವಿಗೆ ಆಗಮಿಸಲಿದೆ.
ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ನಡೆಯಲಿದೆ. ಖಾನಾಪೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಸಂಜೆ 4 ಗಂಟೆಗೆ ಖಾನಾಪೂರದ ದುರ್ಗಾ ನಗರದಲ್ಲಿ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬೈಲಹೊಂಗಲ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶ ರಾಣಿ ಚನ್ನಮ್ಮಾ ಸಮಾಧಿ ರಸ್ತೆ ಬೈಲಹೊಂಗಲದಲ್ಲ್ಲಿ ನಡೆಯಲಿದೆ.
ಸಮಾವೇಶದಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ , ಇಂಧನ ಸಚಿವ ಹಾಗೂ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಎಐಸಿಸಿ ಕಾರ್ಯದರ್ಶಿಗಳಾದ ಸತೀಶ ಜಾರಕಿಹೊಳಿ, ಮಣಿಕಂ ಟ್ಯಾಗೂರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ವಿರಣ್ಣ ಮತ್ತಿಕಟ್ಟಿ ಮತ್ತು ಪಿ.ವಿ.ಮೋಹನ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಶಾಸಕರು ಸೇರಿದಂತೆ ಸಾವಿರಾರು ಕಾಂಗ್ರೆಸ್ ಅಭಿಮಾನಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.Belgaum is a Congress party

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Read Belgaum News & Updates for What’s Happening in Around You @ in News Belgaum Kannada News Portal.