ಮದ್ಯಪಾನ ಸಂಯಮ ಮಂಡಳಿ ಸಭೆ ಅಕ್ರಮ ಮದ್ಯ ಮಾರಾಟಕ್ಕ್ಕೆ ಕಡಿವಾಣ ಹಾಕಿ – ಎಚ್.ಸಿ. ರುದ್ರಪ್ಪ

Drinking Drinking Council Meeting Illegal Wine Sales - HC Rudrappa

ಬೆಳಗಾವಿ: (news belgaum) ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಹಾಗೂ ಮದ್ಯ ವ್ಯಸನಗಳಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಎಚ್.ಸಿ. ರುದ್ರಪ್ಪ ಅವರು ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಫೆ.08) ನಡೆದ ವಿವಿದ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಬಕಾರಿ ಇಲಾಖೆಯ ಅಧಿಕಾರಿಗಳು ಕಳ್ಳಭಟ್ಟಿ ಅಡ್ಡೆಗಳ ಮೇಲೆ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ ಅವರ ಮನಪರಿವರ್ತಿಸಿ ಅವರು ಉತ್ತಮ ಜೀವನ ರೂಪಿಸಿಕೊಳ್ಳಲು ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಸದುಪಯೋಗಿಸಿಕೊಂಡು ಅದರಲ್ಲಿ ತೊಡಗಿಸಿಕೊಳ್ಳುವಂತೆ ಹೇಳಬೇಕೆಂದು ತಿಳಿಸಿದರು.
ಪೊಲೀಸ್ ಇಲಾಖೆಯ ಎಸ್ಪಿ ಹಾಗೂ ಇತರ ಹಿರಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಂತಹ ಗ್ರಾಮಗಳನ್ನು ಪಾನಮುಕ್ತವನ್ನಾಗಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ಗ್ರಾಮವನ್ನು ಅಲ್ಲಿನ ಎಸ್ಪಿ ಅವರು ದತ್ತು ತೆಗೆದುಕೊಂಡು ಪಾನಮುಕ್ತ ಗ್ರಾಮವನ್ನಾಗಿಸಿದ್ದಾರೆ. ಆದ್ದರಿಂದ ಬೆಳಗಾವಿ ಜಿಲ್ಲೆಯ ಎಸ್ಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.
ಶಾಲಾ, ಕಾಲೇಜುಗಳು ಹಾಗೂ ವಸತಿ ನಿಯಗಳಲ್ಲಿ ಮದ್ಯಪಾನ ಹಾಗೂ ಇನ್ನಿತರ ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕೆಂದು ಸೂಚಿಸಿದರು.
ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಅರುಣಕುಮಾರ ಅವರು ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ 2017-18ನೇ ಸಾಲಿನಲ್ಲಿ 123 ದೂರುಗಳನ್ನು ದಾಖಲಾಗಿದ್ದು, 158 ಜನರನ್ನು ಬಂಧಿಸಲಾಗಿದೆ. ಜಿಲ್ಲೆಯಲ್ಲಿ 21 ಕಳ್ಳಭಟ್ಟಿ ಅಡ್ಡೆಗಳು ಇರುವ ಬಗ್ಗೆ ಗಮನಕ್ಕೆ ಬಂದಿದ್ದು, ಕಳ್ಳಭಟ್ಟಿ ಅಡ್ಡೆಗಳ ಮೇಲೆ ದಾಳಿ ನಡೆಸಿ 17 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‍ಪಿ) ರವೀಂದ್ರ ಗಡಾದಿ ಅವರು ಮಾತನಾಡಿ, ಜಿಲ್ಲೆಯಲ್ಲಿ 24 ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದ್ದು, 35 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್, ಪೊಲೀಸ್ ಇಲಾಖೆ, ಅಬಕಾರಿ, ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪತ್ರಿಕಾಗೋಷ್ಠಿ:

News Belgaum-ಮದ್ಯಪಾನ ಸಂಯಮ ಮಂಡಳಿ ಸಭೆ ಅಕ್ರಮ ಮದ್ಯ ಮಾರಾಟಕ್ಕ್ಕೆ ಕಡಿವಾಣ ಹಾಕಿ - ಎಚ್.ಸಿ. ರುದ್ರಪ್ಪ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಎಚ್.ಸಿ. ರುದ್ರಪ್ಪ ಅವರು, ಬಿಹಾರ ರಾಜ್ಯವನ್ನು ಪಾನಮುಕ್ತ ರಾಜ್ಯವನ್ನಾಗಿಸಿದ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮದ್ಯಪಾನವನ್ನು ನಿಷೇದ ಮಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ವರದಿ ಸಿದ್ಧಪಡಿಸಲಾಗಿದ್ದು, ಮಂಡಳಿಯ ಎಲ್ಲ ಸದಸ್ಯರ ಸಭೆ ಕರೆದು ಚರ್ಚಿಸಿದ ಬಳಿಕ ವರದಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಮದ್ಯಪಾನ ನಿಷೇಧದ ಬಳಿಕ ಸರ್ಕಾರಕ್ಕೆ ಕಡಿಮೆಯಾಗುವ ಆದಾಯವನ್ನು ಯಾವ ರೀತಿಯಲ್ಲಿ ಸರಿದೂಗಿಸಿಕೊಳ್ಳಬಹುದು ಎಂಬುದರ ಬಗ್ಗೆ ತಜ್ಞರ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯವನ್ನು ಕೂಡ ಪಡೆಯಲಾಗುತ್ತಿದೆ. ಒಟ್ಟಾರೆ ಪಾನಮುಕ್ತ ರಾಜ್ಯ ನಿರ್ಮಿಸುವುದು ಮಂಡಳಿಯ ಆಶಯವಾಗಿದೆ ಎಂದರು.
ಪಿಯುಸಿ ಹಾಗೂ ನಂತರದ ತರಗತಿಯ ಪಠ್ಯಪುಸ್ತಗಳಲ್ಲಿ ಮದ್ಯಪಾನ ಹಾಗೂ ಇನ್ನಿತರ ವ್ಯಸನಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪಾಠಗಳನ್ನು ಅಳವಡಿಸುವಂತೆಯೂ ವರದಿಯಲ್ಲಿ ಸರ್ಕಾರಕ್ಕೆ ಶಿಪಾರಸ್ಸು ಮಾಡಲಾಗುವುದು ಎಂದು ಹೇಳಿದರು.
ಮದ್ಯಪಾನ ಸಂಯಮ ಮಂಡಳಿಯ ಸದಸ್ಯರಾದ ಗುರುನಾಥ ಉಡಕೇರಿ ಹಾಗೂ ಅರವಿಂದ ಬಾನೆ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು. Drinking Drinking Council Meeting Illegal Wine Sales – HC Rudrappa

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Read Belgaum News & Updates for What’s Happening in Around You @ in News Belgaum Kannada News Portal.