before post

news belgaum:ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ, ಶೌಚಾಲಯ, ಸ್ನಾನಗೃಹ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯ ಯಲ್ಲಮ್ಮನಗುಡ್ಡಕ್ಕೆ

For all kinds of infrastructure

0

ಬೆಳಗಾವಿ:  (news belgaum)  (tarun kranti)   February 18, 2018 ಸುಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಆಗಮಿಸುವುದರಿಂದ ಅವರೆಲ್ಲರಿಗೂ ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ, ಶೌಚಾಲಯ, ಸ್ನಾನಗೃಹ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯವನ್ನು ಒದಗಿಸಲು ಸರ್ಕಾರ ಮುಂದಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ 136 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದೆ. ಮುಂದಿನ ಒಂದು ವರ್ಷದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು.

ಯಲ್ಲಮ್ಮನ ಗುಡ್ಡದಲ್ಲಿ 136 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ- Tarun kranti ಯಲ್ಲಮ್ಮನ ಗುಡ್ಡದಲ್ಲಿ 136 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ- Tarun kranti 1 ಯಲ್ಲಮ್ಮನ ಗುಡ್ಡದಲ್ಲಿ 136 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ- Tarun kranti 2 ಮುಜರಾಯಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿಧಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಒಟ್ಟು136 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ 136 ಕೋಟಿ ವೆಚ್ಚದ ಯೋಜನೆಗಳಿಗೆ ಒಪ್ಪಿಗೆ ನೀಡುವ ಮೂಲಕ ಲಕ್ಷಾಂತರ ಭಕ್ತರಿಗೆ ಅನುಕೂಲ ಕಲ್ಪಿಸಿದ್ದಾರೆ. ಈಗ ಚಾಲನೆ ನೀಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಗುತ್ತಿಗೆದಾರರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಎಚ್.ಕೆ.ಪಾಟೀಲ ಅವರು ಮನವಿ ಮಾಡಿಕೊಂಡರು.

ಉದ್ಯಾನ ನಿರ್ಮಾಣ:

ಯಲ್ಲಮ್ಮನಗುಡ್ಡದಲ್ಲಿ ಸುಂದರ ಉದ್ಯಾನ ನಿರ್ಮಾಣಕ್ಕೆ ಕನಿಷ್ಠ ಮೂರು ಕೋಟಿ ಅಗತ್ಯವಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಯ ವತಿಯಿಂದ ನೀಡಲಾಗುವುದು ಎಂದು ಎಚ್.ಕೆ.ಪಾಟೀಲ ತಿಳಿಸಿದರು. ಇದಕ್ಕೆ ಸ್ಪಂದಿಸಿದ ಸಂಸದ ಸುರೇಶ್ ಅಂಗಡಿ ಅವರು ಕೂಡ ಉದ್ಯಾನ ನಿರ್ಮಾಣಕ್ಕೆ ನೆರವು ನೀಡುವುದಾಗಿ ಘೋಷಿಸಿದರು.

ರೈಲು ಮಾರ್ಗ:

ನೆರೆಯ ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತಾದಿಗಳು ಯಲ್ಲಮ್ಮಗುಡ್ಡಕ್ಕೆ ಆಗಮಿಸುವುದರಿಂದ ಈ ಕ್ಷೇತ್ರಕ್ಕೆ ರೈಲು ಸಂಪರ್ಕ ಕಲ್ಪಿಸಲು ಕೇವಲ 70 ಕಿ.ಮೀ. ರೈಲು ಮಾರ್ಗ ನಿರ್ಮಾಣದ ಅಗತ್ಯವಿದೆ. ರೈಲು ಮಾರ್ಗ ನಿರ್ಮಾಣಕ್ಕೆ ರಾಜ್ಯ  ಸರ್ಕಾರ ತನ್ನ ಪಾಲಿನ ಶೇ.50 ಅನುದಾನ ಒದಗಿಸಲು ಸಿದ್ಧವಿದೆ. ಮುಂದಿನ ಎರಡು ವರ್ಷಗಳಲ್ಲಿ ರೈಲು ಮಾರ್ಗ ನಿರ್ಮಾಣಕಾರ್ಯ ಆರಂಭಗೊಳ್ಳಬೇಕಿದೆ ಎಂದರು.

ಸಮಾರಂಭದಲ್ಲಿ ದೀಪ ಬೆಳಗಿಸಿ ಮಾತನಾಡಿದ ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ, ದೇಶದ ಪ್ರಸಿದ್ಧ ಯಲ್ಲಮ್ಮನಗುಡ್ಡಕ್ಕೆ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿರುವ ಸರ್ಕಾರ 136 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡುತ್ತಿದೆ ಎಂದರು.

ಮುಂದಿನ ಐವತ್ತು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರು, ರಸ್ತೆ, ಸ್ನಾನಗೃಹ, ಶೌಚಾಲಯ, ಆಡಳಿತ ಕಟ್ಟಡ, ಛತ್ರ ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಸುಕ್ಷೇತ್ರದ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ ಎಂದರು.

ತಿರುಪತಿ ಮಾದರಿಯಲ್ಲಿ ಯೋಜನೆ ರೂಪಿಸಲಾಗಿದ್ದು, ಮಂಬರುವ ದಿನಗಳಲ್ಲಿ ದೇಶದ ಮಾದರಿ ಧಾರ್ಮಿಕ ಸ್ಥಳವಾಗಿ ಎಲ್ಲಮ್ಮನಗುಡ್ಡವನ್ನು ಅಭಿವೃದ್ಧಿ ಹೊಂದಲಿದೆ ಎಂದು ಸಚಿವ ಲಮಾಣಿ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು, “ಯಲ್ಲಮ್ಮ ತಾಯಿ ಬಡವರ ದೇವರು. ಈ ಕ್ಷೇತ್ರದ ಅಭಿವೃದ್ಧಿ ಪುಣ್ಯದ ಕೆಲಸವಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಸ್ಥಳೀಯರ ಒತ್ತಾಸೆಯಿಂದ ಅಭಿವೃದ್ಧಿ ಕೆಲಸ ಇದೀಗ ಕೈಗೂಡುತ್ತಿದೆ” ಎಂದರು.

ಅತಿಥಿಯಾಗಿ ಆಗಮಿಸಿದ್ದ ಸಂಸದ ಸುರೇಶ್ ಅಂಗಡಿ ಅವರು, ಸುಕ್ಷೇತ್ರವನ್ನು ಶುಚಿಯಾಗಿಡಲು ಸ್ವಚ್ಛಭಾರತ ಯೋಜನೆಯಡಿ ಕೇಂದ್ರ ಸರ್ಕಾರದ ವತಿಯಿಂದ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಕಾಮಗಾರಿ ವಿವರ:

ಎರಡನೇ ಹಂತದ ಕುಡಿಯುವ ನೀರಿನ ಯೋಜನೆ 31.20 ಕೋಟಿ; ರಸ್ತೆ ಅಭಿವೃದ್ಧಿ 18 ಕೋಟಿ; ಬೈಪಾಸ್ ರಸ್ತೆ ಹಾಗೂ ಸೇತುವೆ ನಿರ್ಮಾಣ 15 ಕೋಟಿ; ದೇವಸ್ಥಾನದ ಕೂಡುರಸ್ತೆ ಅಗಲೀಕರಣ 16.78 ಕೋಟಿ; ಶೌಚಾಲಯ ಹಾಗೂ ಸ್ನಾನಗೃಹ ನಡುವೆ ನಿರ್ಮಾಣ 6 ಕೋಟಿ ಹಾಗೂ ಎಲ್ಲಮ್ಮ ದೇವಸ್ಥಾನದ ನಿಧಿಯಿಂದ 42 ಕೋಟಿ ಸೇರಿದಂತೆ ಒಟ್ಟಾರೆ 136 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಮನಗೌಡ ಶಿವನಗೌಡ ತಿಪರಾಶಿ,  ಶಾಸಕ ಆನಂದ ಮಾಮನಿ ಅಧ್ಯಕ್ಷತೆ ವಹಿಸಿದ್ದರು. ಸಂಸದ ಸುರೇಶ್ ಅಂಗಡಿ, ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಇತರರು ಇದ್ದರು.For all kinds of infrastructure

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news