ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

In the publication.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಬೆಳಗಾವಿ:( news belgaum)ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅವರು ಜನವರಿ 31 ರಂದು ಬೆಳಗಾವಿ ಜಿಲ್ಲೆಯ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.
ಜನವರಿ 31 ರಂದು ಬೆಳಿಗ್ಗೆ 9 ಗಂಟೆಗೆ ನಿಪ್ಪಾಣಿಯ ಕೆ.ಎಲ್. ಜಿ.ಆಯ್.ಬಾಗೇವಾಡಿ ಮಹಾವಿದ್ಯಾಲಯದ ಆಶೀರ್ವಾದ ಸಾಂಸ್ಕøತಿಕ ಭವನದಲ್ಲಿ ನಡೆಯುವ ಬೆಳಗಾವಿ ಜಿಲ್ಲಾ ಗಡಿ ಹೋರಾಟಗಾರರ ಕನ್ನಡ ಸಮಾವೇಶದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2-30ಕ್ಕೆ ಬೆಳಗಾವಿಗೆ ಆಗಮಸಿ, ಸಂಜೆ 5-45 ಗಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಿಕ ಬಂದೂಕು ತರಬೇತಿ; ಸದಸ್ಯತ್ವ ನೋಂದಣಿಗೆ ಅರ್ಜಿ

ಬೆಳಗಾವಿ: ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ (ಬೆಳಗಾವಿ ತಾಲೂಕು) ಪ್ರದೇಶದ ನಾಗರಿಕÀರಿಗೆ 2018ನೇ ಸಾಲಿನ ಅವಧಿಯಲ್ಲಿ ನಾಗರಿಕ ಬಂದೂಕು ತರಬೇತಿ ನಡೆಯಲಿದ್ದು, ತರಬೇತಿ ಪಡೆಯುವ ಆಸಕ್ತರ ತಮ್ಮ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಆಧಾರ ಕಾರ್ಡನ ಪ್ರತಿ ಹಾಗೂ 3 ಭಾವಚಿತ್ರದ ವಿವರದೊಂದಿಗೆ ಅರ್ಜಿಯನ್ನು ಫೆಬ್ರುವರಿ 5 ರೊಳಗಾಗಿ ನೀಡಿ ನೋಂದಾಯಿಸಿಕೊಳ್ಳಬೇಕು. ತರಬೇತಿ ದಿನಾಂಕವನ್ನು ಮುಂದೆ ನಿಗದಿಪಡಿಸಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂ.ಬಿ.ಗಸ್ತೆ; ಸೇವೆಯಿಂದ ವಜಾ

ಬೆಳಗಾವಿ: ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸವದತ್ತಿ ಈ ಶಾಲೆಯ (ಪಿಸಿಎಂ) ಸಹ ಶಿಕ್ಷಕರಾದ ಎಂ.ಬಿ ಗಸ್ತೆ ಇವರನ್ನು ದೀರ್ಘಾವಧಿಯಿಂದ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುವ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎ. ಬಿ. ಪುಂಡಲಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Read Belgaum News & Updates for What’s Happening in Around You @ in News Belgaum Kannada News Portal.