before post

news belgaum:ಫೆ.20 ರಂದು ಸರ್ವಜ್ಞ ಜಯಂತಿ

Sarvajna Jayanti on February 20

0

ಬೆಳಗಾವಿ:(tarun kranti🙂 (news belgaum)ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 20 ರಂದು ಸರ್ವಜ್ಞ ಜಯಂತಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9:30ಕ್ಕೆ ನಗರದ ಅಶೋಕ ವೃತ್ತದಿಂದ ಸರ್ವಜ್ಞ ಭಾವಚಿತ್ರದ ಮೆರವಣಿಗೆ ಜರುಗಲಿದ್ದು, ಕುಮಾರ ಗಂಧರ್ವ ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ.
ಬೆಳಿಗ್ಗೆ 11:30ಕ್ಕೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗುವುದು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸುವರು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಶೇಠ ಅವರು ಅಧ್ಯಕ್ಷತೆ ವಹಿಸುವರು. ನಿವೃತ್ತ ತತ್ವಶಾಸ್ತ್ರ ಪ್ರಾಧ್ಯಾಪಕರಾದ ಡಾ|| ಐ.ಎಸ್. ಕುಂಬಾರ ಅವರು ಉಪನ್ಯಾಸ ನೀಡುವರು.
ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಸೇರಿದಂತೆ ಜಿಲ್ಲೆಯ ಎಲ್ಲ ಸಂಸತ್ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಮಹಾಪೌರರು, ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.Sarvajna Jayanti on February 20