ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಯಶಸ್ವಿಗೊಳಿಸಿ: – ಸಿಇಒ ರಾಮಚಂದ್ರನ್

Succeeded by National Anti-Dissolution Day: - CEO Ramachandran

ಜಿಲ್ಲಾ-ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಯಶಸ್ವಿಗೊಳಿಸಿ:
– ಸಿಇಒ ರಾಮಚಂದ್ರನ್

News Belgaum-ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಯಶಸ್ವಿಗೊಳಿಸಿ:  - ಸಿಇಒ ರಾಮಚಂದ್ರನ್
ಬೆಳಗಾವಿ:( news belgaum) ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯಾದ ಫೆ.12 ರಂದು ಎಲ್ಲ ಮಕ್ಕಳಿಗೂ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸಿ, ಸೇವಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್ ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯತನ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ, ಶುಚಿ ಕಾರ್ಯಕ್ರಮ, ವಿಫ್ಸ್ ಹಾಗೂ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸÀಭೆ ಹಾಗೂ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ (ಫೆ.2) ವಿಡಿಯೋ ಕಾನ್ಫರೆನ್ಸ್ ಮೂಲಕ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಫೆ.12 ರಂದು ರಾಷ್ಟ್ರೀಯ ಜಂತುಹುಳು ದಿನಾಚರಣೆ

ಕಾರ್ಯಕ್ರಮ ನಡೆಯಲಿದ್ದು, ಅಂದು ಎಲ್ಲ ಅಂಗನವಾಡಿ ಕೇಂದ್ರಗಳು, ಶಾಲಾ, ಕಾಲೇಜುಗಳು, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಬೇಕು. ಫೆ.12 ರಂದು ಮಾತ್ರೆ ಸೇವಿಸದೇ ಉಳಿದವರನ್ನು ಗುರುತಿಸಿ, ಫೆ.17 ರವರೆಗೆ ಅಂತವರಿಗೂ ಸಹ ಮಾತ್ರೆಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಮಕ್ಕಳ ದೇಹದಲ್ಲಿ ಉತ್ಪತ್ತಿಯಾಗುವ ಜಂತು ಹುಳುಗಳು ಕರುಳಬಳ್ಳಿ ಸೇರಿ ಪೌಷ್ಠಿಕಾಂಶವನ್ನು ಹೀರಿಕೊಳ್ಳುತ್ತವೆ. ಇದರಿಂದ ಮಕ್ಕಳಲ್ಲಿ ರಕ್ತಹೀನತೆ, ತೂಕದ ಪ್ರಮಾಣ ಕಡಿಮೆಯಾಗುವುದು ಸೇರಿದಂತೆ ಇನ್ನಿತರ ಕಾಯಿಲೆಗಳು ಬರುತ್ತವೆ. ಆದ್ದರಿಂದ ಈ ಬಗ್ಗೆ ಎಲ್ಲ ಪಾಲಕರು ಹಾಗೂ ಮಕ್ಕಳಿಗೂ ಅರಿವು ಮೂಡಿಸಿ, ಮಕ್ಕಳು ತಪ್ಪದೇ ಮಾತ್ರೆಗಳನ್ನು ಸೇವಿಸುವಂತೆ ನೋಡಿಕೊಳ್ಳಬೇಕು. ಈ ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಬೇಕು. ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ರೀತಿಯಲ್ಲೂ ಸಹಕರಿಸಿ, ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ದಿನಾಚರಣೆಯ ಕುರಿತು ಜಿಲ್ಲೆಯಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಎನ್‍ಸಿಸಿ, ಎನ್‍ಎಸ್‍ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳೊಂದಿಗೆ ಶಾಲಾ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಜಾಗೃತಿ ಜಾಥಾ, ಶಾಲೆಗಳಲ್ಲಿ ಹಾಗೂ ಮನೆಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯವನ್ನು ಮಾಡಬೇಕು. ಮಾತ್ರೆ ಸೇವನೆಯಿಂದ ಸಮಸ್ಯೆಯಾಗುತ್ತದೆ ಎಂಬ ತಪ್ಪು ತಿಳಿವಳಿಕೆ, ಗೊಂದಲ ಹಾಗೂ ವದಂತಿಗಳ ಬಗ್ಗೆ ಪಾಲಕರು ಹಾಗೂ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ತಿಳಿಹೇಳಿ, ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಸಂಬಂಧಿಸಿದ ವಸತಿ ನಿಲಯ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಜಂತುಹುಳು ಮಾತ್ರೆಯ ಬಗ್ಗೆ ಅರಿವು ಮೂಡಿಸಬೇಕು ಹಾಗೂ ತಪ್ಪದೇ ಸೇವಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸ್ವಚ್ಛತೆಯ ಬಗ್ಗೆ ಗಮನ ಹರಿಸಿ:

ಎಲ್ಲ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಕ್ಕಳಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸುವುದರ ಜೊತೆಗೆ ಗ್ರಾಮಸ್ಥರಲ್ಲೂ ಅರಿವು ಮೂಡಿಸಬೇಕು. ಸ್ವಚ್ಛ ಭಾರತ ಮಿಷನ್ ವಾಹನಗಳು ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಶೌಚಾಲಯ ನಿರ್ಮಾಣಕ್ಕೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಶಾಲೆಗಳಲ್ಲಿರುವ ಶೌಚಾಲಯಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಶಾಲೆಗಳಲ್ಲಿ ಶೌಚಾಲಯ ಬಳಕೆ ಮಾಡಲು ಯಾವುದಾದರು ಸಮಸ್ಯೆಗಳಿದ್ದರೆ ನೇರವಾಗಿ ಜಿಲ್ಲಾ ಪಂಚಾಯತ ಗಮನಕ್ಕೆ ತರಬಹುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಅಪ್ಪಾಸಾಹೇಬ್ ನರಹಟ್ಟಿ ಅವರು ಮಾತನಾಡಿ, ಸರಕಾರಿ ಶಾಲಾ, ಕಾಲೇಜುಗಳ ಮಕ್ಕಳೊಂದಿಗೆ ಖಾಸಗಿ ಶಾಲಾ, ಕಾಲೇಜುಗಳ ಮಕ್ಕಳಿಗೂ ಸಹ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಗುವುದು. 6 ತಿಂಗಳ ಮಗುವಿನಿಂದ ಹಿಡಿದು 19 ವರ್ಷದೊಳಗಿನ ಮಕ್ಕಳು ಹಾಗೂ ಯುವಕ, ಯುವತಿಯರಿಗೂ ಮಾತ್ರೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಜಂತುಹುಳು ಮಾತ್ರೆಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗಳು ಆಗುವುದಿಲ್ಲ. ಪಾಲಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಆರ್‍ಸಿಎಚ್‍ಒ ಐ.ಪಿ. ಗಡಾದಿ ಅವರು ಮಾತನಾಡಿ, ಶುಚಿ ಕಾರ್ಯಕ್ರಮದಡಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಿಕ್ಷಕಿಯರು ವಿದ್ಯಾರ್ಥಿನಿಯರಲ್ಲಿ ಋತುಸ್ರಾವದ ಸಂದರ್ಭದಲ್ಲಿ ವಹಿಸಬೇಕಾದ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ, ಸ್ಯಾನಿಟರಿ ನ್ಯಾಪಕಿನ್‍ಗಳನ್ನು ವಿತರಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಸರ್ಕಾರಿ ಶಾಲೆ, ಅನುದಾನಿತ ಸರ್ಕಾರಿ ಶಾಲೆ ಹಾಗೂ ವಸತಿ ನಿಲಯಗಳ 6 ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪಕಿನ್‍ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಶೀಘ್ರದಲ್ಲೇ ಪಿಯುಸಿ ವಿದ್ಯಾರ್ಥಿನಿಯರಿಗೂ ಸ್ಯಾನಿಟರಿ ನ್ಯಾಪಕಿನ್‍ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಸ್ವಚ್ಛತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಉಪಯೋಗಿಸಿದ ಸ್ಯಾನಿಟರಿ ನ್ಯಾಪಕಿನ್‍ಗಳನ್ನು ಎಲ್ಲೆಂದರಲ್ಲಿ ಎಸೆಯದೇ ಒಂದೆಡೆ ಸಂಗ್ರಹಿಸಿ, ಸುಟ್ಟು ಹಾಕಬೇಕು ಎಂದು ತಿಳಿಸಿದರು. ವಿಫ್ಸ್ ಹಾಗೂ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಎಡಿಎಚ್‍ಒ ಡಾ. ಶಶಿಕಾಂತ ಗುನ್ನಾಳ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉನಿರ್ದೇಶಕರಾದ ಪುಂಡಲೀಕ. ಎ.ಬಿ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರÀ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆÀಯಲ್ಲಿ ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲ ತಾಲೂಕುಗಳ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಪಾಲ್ಗೊಂಡಿದ್ದರು.

Succeeded by National Anti-Dissolution Day: – CEO Ramachandran

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Read Belgaum News & Updates for What’s Happening in Around You @ in News Belgaum Kannada News Portal.