ರೊಚ್ಚಿಗೆದ್ದ ಸಾರ್ವಜನಿಕರು ಲಾರಿಗೆ ಬೆಂಕಿ.

The public burned

ಬೆಳಗಾವಿ: (news belgaum)ನಗರದ RTO ವೃತ್ತದಲ್ಲಿ ಲಾರಿ ಢಿಕ್ಕಿ ಹೊಡೆದು ನಗರದ ಬೈಕ್ ಸವಾರ ಯುವಕನೋರ್ವ ಮೃತಪಟ್ಟಿದ್ದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಲಾರಿಗೆ ಬೆಂಕಿ ಹಚ್ಚಿದರು.
ಸರಿಸುಮಾರು ಸಂಜೆ 4 ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೈಕ್ ಸವಾರರಿಬ್ಬರಿಗೆ ಹಿಂಬದಿಯಿಂದ ಲಾರಿ ಗುದ್ದಿದ್ದರಿಂದ ಬೈಕ್ ಸವಾರ ಬಸೀರ್ ಅಹ್ಮದ್ ಶೇಖ್ (20) ಕಾಕತಿಯಲ್ಲಿ ಗ್ಯಾರೇಜ್ ಕೆಲಸ ಮಾಡುತ್ತಿದ್ದ ಈತನಿಗೆ Ka-22, B-9855 ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತ ಪಟ್ಟು ಇನ್ನೊಬ್ಬ ಗಂಭೀರ ಗಾಯಗೊಂಡನು.
ಲಾರಿ ಮುಕ್ಕಾಲು ಪಾಲು ಸುಡುತ್ತಿದ್ದಂತೆ ಪೊಲೀಸರು ಆಗಮಿಸಿ ಸ್ಥಳೀಯ ದೇವಸ್ಥಾನದ ನೀರು ಪಡೆದು ನಂದಿಸುಲು ಯತ್ನಿಸಿದರು. ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ಸಾರ್ವಜನಿಕರು ಸೇರುತ್ತಿದ್ದಂತೆ ಸ್ಥಳಕ್ಕೆ ಕಮಿಷ್ನರ್ ಡಾ. ಡಿ. ಸಿ. ರಾಜಪ್ಪ, ಡಿಸಿಪಿ ಸೀಮಾ ಲಾಟಕರ, ಮಹಾನಿಂಗ ನಂದಗಾವಿ, ಶಂಕರ ಮಾರಿಹಾಳ ಆಗಮಿಸಿ ಪರಿಸ್ಥಿತಿ ತಹಬದಿಗೆ ತಂದರು.
ಅಗ್ನಿಶಾಮಕ ಸಿಬ್ಬಂಧಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕ್ರೇನ್ ಮೂಲಕ ಲಾರಿ ರಸ್ತೆಯಾಚೆ ಎಳೆದು ಹಾಕಲಾಯಿತು. ಮೃತ ಯುವಕನ ಮಾಹಿತಿ ಕಲೆ ಹಾಕಲಾಗುತ್ತಿದೆ.

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Read Belgaum News & Updates for What’s Happening in Around You @ in News Belgaum Kannada News Portal.