ಸಂಭ್ರಮದ ಗಣರಾಜ್ಯೋತ್ಸವ ಭಾರತದ ಸಂವಿಧಾನ ಜಗತ್ತಿಗೆ ಮಾದರಿ: – ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

The Republic of India celebrates the constitution of the world: - Minister of State for Ramesh Jarakiholi

Belgaum News🙁 News Belgaum) ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಸಡಗರ, ಸಂಭ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಪವಿತ್ರ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಾವೆಲ್ಲರೂ ಜಾತಿಭೇದ ಮರೆತು ಕೂಡಿ ಬಾಳಿದಾಗ ಮಾತ್ರ ದೇಶದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಹಾಗೂ ಸದೃಢ ಭಾರತ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಕರೆ ನೀಡಿದರು.
ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ದೂದೃಷ್ಟಿ, ಸಾಮಾಜಿಕ ನ್ಯಾಯದ ಪರಿಕಲ್ಪನೆ ಹಾಗೂ ಸಮಪಾಲು-ಸಮಬಾಳು ಎಂಬ ತತ್ವದ ಆಧಾರದ ಮೇಲೆ ರಚಿತಗೊಂಡಿರುವ ನಮ್ಮ ಸಂವಿಧಾನವು ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದರು.
ಸಂಭ್ರಮದ ಗಣರಾಜ್ಯೋತ್ಸವ ಭಾರತದ ಸಂವಿಧಾನ ಜಗತ್ತಿಗೆ ಮಾದರಿ: - ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ- Tarun krantiಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾತಂತ್ರ್ಯ, ಸಮಾನತೆ ಹಾಗೂ ಸಹಬಾಳ್ವೆಯಿಂದ ದೇಶವನ್ನು ಉನ್ನತಿಯ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬುದು ಡಾ. ಅಂಬೇಡ್ಕರ್ ಅವರ ಆಶಯವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಸರಕಾರ ಸಾಮಾಜಿಕ ನ್ಯಾಯದ ಹಾದಿಯಲ್ಲಿ ಮುನ್ನಡೆದು ಜನರ ಆಶಯದಂತೆ ನುಡಿದಂತೆ ನಡೆಯುತ್ತಿದೆ ಎಂದು ತಿಳಿಸಿದರು.
ದೇಶದ ಸಮಗ್ರ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯದ ಪಾಲು ಗಣನೀಯವಾಗಿದೆ. ಕನ್ನಡಿಗರ ಭಾಷಾ ಸಹಿಷ್ಣುತೆ, ಹೃದಯ ವೈಶಾಲ್ಯತೆ ಮತ್ತು ದೇಶಪ್ರೇಮದಿಂದಾಗಿ ಭಾರತದಲ್ಲಿ ಕನ್ನಡನಾಡಿಗೆ ವಿಶಿಷ್ಟ ಸ್ಥಾನ ಲಭಿಸಿದೆ ಎಂದು ಹೇಳಿದರು.

ಆಕರ್ಷಕ ಪಥಸಂಚಲನ:
- Tarun kranti 3 - Tarun kranti 4ಕೆಎಸ್‍ಆರ್‍ಪಿ ತುಕಡಿ, ಡಿಎಆರ್ ಮತ್ತು ಸಿಎಆರ್ ತುಕಡಿ, ನಾಗರಿಕ ಪೊಲೀಸ್ ಪಡೆ ಸೇರಿದಂತೆ ಗೃಹ ರಕ್ಷಕ ದಳ, ಮಹಿಳಾ ಪೊಲೀಸ್ ತುಕಡಿ, ಎನ್‍ಸಿಸಿ ವಿಂಗ್ ಹಾಗೂ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಮಹೇಶ್ವರಿ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಪಥಸಂಚಲನದ ಪ್ರಮುಖ ಆಕರ್ಷಣೆಯಾಗಿದ್ದರು. ಕಮಾಂಡೆಂಟ್ ವಿ.ಪಿ. ಘೋಡಕೆ ಅವರು ಕವಾಯತು ಹಾಗೂ ಪಥಸಂಚಲನದ ನೇತೃತ್ವ ವಹಿಸಿದ್ದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ 5 ಜನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಗೌರವಿಸಲಾಯಿತು. ಘಟಪ್ರಭಾದ ಅ.ಶಿ. ಕರಲಿಂಗಣ್ಣವರ, ಹುದಲಿ ಗ್ರಾಮದ ಗಂಗಪ್ಪ ಮಾಳಗಿ, ಮರಡಿಮಠದ ಶಿವಲಿಂಗಪ್ಪ ಗುಣಕಿ, ಬೆಳಗಾವಿಯ ರಾಜೇಂದ್ರ ಕಲಘಟಗಿ, ಬೆಳವಡಿ ಗ್ರಾಮದ ಸುಬ್ರಾವ ಹುದ್ದಾರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಗಣ್ಯರು ಸನ್ಮಾನಿಸಿದರು.

ಸರ್ಕಾರಿ ಅಧಿಕಾರಿಗಳಿಗೆ ಸರ್ವೋತ್ತಮ ಪ್ರಶಸ್ತಿ:

ಸಂಭ್ರಮದ ಗಣರಾಜ್ಯೋತ್ಸವ ಭಾರತದ ಸಂವಿಧಾನ ಜಗತ್ತಿಗೆ ಮಾದರಿ: - ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ- Tarun kranti 2ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ ಸವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಅಬ್ದುಲ್ ರಶೀದ ಎಂ. ಮಿರ್ಜನ್ನವರ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಚಿದಾನಂದ ಬಾಕೆ, ಜಿಲ್ಲಾ ಪೊಲೀಸ್ ಕಾರ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಅಧಿಕಾರಿಯಾದ ಪ್ರವೀಣ ಭಜಂತ್ರಿ, ಸುಳೇಭಾವಿ ಗ್ರಾಮದ ಪಂಚಾಯತ ಅಭಿವೃದ್ಧಿ ಅಧಿಕಾರಿಯಾದ ಶ್ರೀದೇವಿ ಹಿರೇಮಠ ಅವರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ, ಸನ್ಮಾನಿಸಲಾಯಿತು.
ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ದಂಡ ವಿಧಿಸಿ, ಕಾನೂನು ಪಾಲನೆ ಮಾಡುವ ಬಗ್ಗೆ ಜಾಗೃತಿ ಮೂಡಿಸಿದ ಸಂಚಾರಿ ನಿಯಂತ್ರಣ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಾಂಕೇತಿಕವಾಗಿ ಮೊಬೈಲ್‍ಗಳನ್ನು ವಿತರಿಸಲಾಯಿತು.

ವಿವಿಧ ಶಾಲೆಗಳಿಗೆ ಸ್ವಚ್ಛ ವಿದ್ಯಾಲಯ ಪ್ರಶಸ್ತಿ:

ನಗರದ ಜೈನ್ ಹೆರಿಟೇಜ ಸ್ಕೂಲ್ ಮತ್ತು ಪೊದಾರ ಅಂತಾರಾಷ್ಟ್ರೀಯ ಶಾಲೆ, ಅಸೋಗಾ ಗ್ರಾಮದ ಮರಾಠಿ ಹಿರಿಯ ಪ್ರಾಥಮಿಕ ಶಾಲೆ, ಪೀರನವಾಡಿ ಗ್ರಾಮದ ಮರಾಠಿ ಹಿರಿಯ ಪ್ರಾಥಮಿಕ ಶಾಲೆ, ಹೊಸಟ್ಟಿ ಗ್ರಾಮದ ಮರಾಠಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸ್ವಚ್ಛ ವಿದ್ಯಾಲಯ ಪ್ರಶಸ್ತಿ ನೀಡಿ, ಪುರಸ್ಕರಿಸಲಾಯಿತು.

ಸಾಂಸ್ಕøತಿಕ ಕಾರ್ಯಕ್ರಮಗಳು:

ನಗರದ ವಿವಿಧ ಶಾಲೆಯ ಮಕ್ಕಳು ಕನ್ನಡ, ಹಿಂದಿ ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶಿಸಿ ನೆರೆದಿದ್ದವರನ್ನು ರಂಜಿಸಿದರು. ನಗರದ ವಿವಿಧ ಎಂಟು ಶಾಲೆಗಳ 520 ಮಕ್ಕಳು ಸಾಮೂಹಿಕ ಕವಾಯತು ಪ್ರದರ್ಶಿಸಿದ್ದು ವಿಶೇಷವಾಗಿತ್ತು. ಲಿಟಲ್ ಸ್ಕಾಲರ್ ಅಕಾಡೆಮಿ, ಮಹಾಂತೇಶ ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ವನಿತಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಆಕರ್ಷಕವಾಗಿ ನೃತ್ಯ ಪ್ರದರ್ಶಿಸಿದರು.
ಸಂಸದ ಸುರೇಶ ಅಂಗಡಿ, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಫಿರೋಜ್ ಶೇಠ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಸಂಜಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸಂಜೋತಾ ಬಾಂದೇಕರ, ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಆಶಾ ಐಹೊಳೆ ಅವರು ಉಪಸ್ಥಿತರಿದ್ದರು.
ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ, ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕ ಕುಮಾರ, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಪೊಲೀಸ್ ಕಮಿಷನರ್ ಡಾ|| ಡಿ.ಸಿ. ರಾಜಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್. ಸುಧೀರಕುಮಾರ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ, ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಆಶಾ ಐಹೊಳೆ, ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ, ತಹಶೀಲ್ದಾರ ಮಂಜುಳಾ ನಾಯಕ, ಡಿಸಿಪಿ ಸೀಮಾ ಲಾಟ್ಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಗಣ್ಯರು ಪಾಲ್ಗೊಂಡಿದ್ದರು.
ಜಿಲ್ಲಾ ನೆಹರು ಯುವಕೇಂದ್ರದ ನಿವೃತ್ತ ಸಮನ್ವಯಾಧಿಕಾರಿ ಎಸ್.ಯು. ಜಮಾದಾರ ಹಾಗೂ ಶಿಕ್ಷಕ ರಮೇಶ ಗೋಣಿ ಅವರು ನಿರೂಪಿಸಿದರು.
69ನೇ ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಉಪಸ್ಥಿತರಿರುವ ಸ್ವಾತಂತ್ರ್ಯ ಹೋರಾಟಗಾರರೇ, ಚುನಾಯಿತ ಪ್ರತಿನಿಧಿಗಳೇ, ನಾಗರಿಕ ಬಂಧುಗಳೇ, ಮಾಧ್ಯಮದ ಸ್ನೇಹಿತರೇ ಹಾಗೂ ಮಕ್ಕಳೇ, ತಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
395 ವಿಧಿಗಳು, 8 ಅನುಸೂಚಿಗಳು ಹಾಗೂ 22 ಅಧ್ಯಾಯಗಳನ್ನೊಳಗೊಂಡ ಭಾರತದ ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು. ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ.
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ದೂರದೃಷ್ಟಿ, ಸಾಮಾಜಿಕ ನ್ಯಾಯದ ಪರಿಕಲ್ಪನೆ ಹಾಗೂ ಸಮಪಾಲು-ಸಮಬಾಳು ಎಂಬ ತತ್ವದ ಆಧಾರದ ಮೇಲೆ ರಚಿತಗೊಂಡಿರುವ ನಮ್ಮ ಸಂವಿಧಾನವು ಇಡೀ ಜಗತ್ತಿಗೆ ಮಾದರಿಯಾಗಿದೆ.
ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾತಂತ್ರ್ಯ, ಸಮಾನತೆ ಹಾಗೂ ಸಹಬಾಳ್ವೆಯಿಂದ ದೇಶವನ್ನು ಉನ್ನತಿಯ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬುದು ಡಾ.ಅಂಬೇಡ್ಕರ್ ಅವರ ಆಶಯವಾಗಿತ್ತು.
ದೇಶದ ಸಮಗ್ರ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯದ ಪಾಲು ಗಣನೀಯವಾಗಿದೆ. ಕನ್ನಡಿಗರ ಭಾಷಾ ಸಹಿಷ್ಣುತೆ, ಹೃದಯ ವೈಶಾಲ್ಯತೆ ಮತ್ತು ದೇಶಪ್ರೇಮದಿಂದಾಗಿ ಭಾರತದಲ್ಲಿ ಕನ್ನಡನಾಡಿಗೆ ವಿಶಿಷ್ಟ ಸ್ಥಾನ ಲಭಿಸಿದೆ.
ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು ಹಾಗೂ ನಮ್ಮ ನೆಚ್ಚಿನ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರವು ಸಾಮಾಜಿಕ ನ್ಯಾಯದ ಹಾದಿಯಲ್ಲಿ ಮುನ್ನಡೆದು ಜನರ ಆಶಯದಂತೆ, ನುಡಿದಂತೆ ನಡೆಯುತ್ತಿದೆ.
ನಮ್ಮ ಸರ್ಕಾರವು ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ವಸತಿ ಭಾಗ್ಯ, ಆರೋಗ್ಯ ಭಾಗ್ಯ, ಕ್ಷೀರಧಾರೆ, ಕೃಷಿ ಯಂತ್ರಧಾರೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಂವಿಧಾನದ ಆಶಯವನ್ನು ಎತ್ತಿಹಿಡಿದಿದೆ ಎಂದು ತಮಗೆಲ್ಲ ತಿಳಿಸಬಯಸುತ್ತೇನೆ.
ಕಳೆದ ಮೂರು ವರ್ಷಗಳಲ್ಲಿ ರಾಜ್ಯವು ಕಂಡ ತೀವ್ರ ಬರಗಾಲದ ಹಿನ್ನೆಲೆಯಲ್ಲಿ, ರಾಜ್ಯದ ರೈತರು ಸಹಕಾರ ಸಂಸ್ಥೆಗಳಿಂದ ಅಲ್ಪಾವಧಿ ಕೃಷಿ ಸಾಲ ಪಡೆದು, ದಿ.20-6-2017ಕ್ಕೆ ಹೊರಬಾಕಿ ಹೊಂದಿರುವ ಸಾಲದಲ್ಲಿ ರೂ.50000/- ಗಳ ಸಾಲವನ್ನು ರೈತರು ಮರುಪಾವತಿ ಮಾಡಬೇಕಾದ ಗಡುವಿಗೆ ಅನುಗುಣವಾಗಿ ಸಾಲ ಮನ್ನಾ ಮಾಡಲಾಗಿದೆ.
ಈ ಯೋಜನೆಯಡಿಯಲ್ಲಿ 22,22,7506 ರೈತರು ರೂ.8165 ಕೋಟಿಗಳ ಲಾಭ ಪಡೆಯಲಿದ್ದು, ಇದುವರೆಗೆ 10,88,898 ರೈತರಿಗೆ ರೂ. 1932.60 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಈ ಯೋಜನೆಯಡಿಯಲ್ಲಿ 3,33,658 ರೈತರು ರೂ.1084.82 ಕೋಟಿಗಳ ಲಾಭ ಪಡೆಯಲಿದ್ದು, ಇದುವರೆಗೆ 5441 ರೈತರಿಗೆ ರೂ.11.00 ಕೋಟಿಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ರೈತರು ಮೇ ಮತ್ತು ಜೂನ್ 2018 ರಲ್ಲಿ ಲಾಭ ಪಡೆಯಲಿದ್ದಾರೆ.
2017-18 ನೇ ಸಾಲಿಗೆ ಸಹಕಾರ ಸಂಘಗಳ ಮೂಲಕ 25 ಲಕ್ಷ ರೈತರಿಗೆ ರೂ.13,500 ಕೋಟಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದ್ದು, ಡಿಸೆಂಬರ್ ಅಂತ್ಯಕ್ಕೆ 10.71 ಲಕ್ಷ ರೈತರಿಗೆ ರೂ.6583 ಕೋಟಿ ಕೃಷಿ ಸಾಲ ವಿತರಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ 2.06 ಲಕ್ಷ ರೈತರಿಗೆ ರೂ.871 ಕೋಟಿ ಕೃಷಿ ಸಾಲ ವಿತರಿಸಲಾಗಿದೆ. ರಾಜ್ಯದ ರೈತರಿಗೆ ಸಹಕಾರ ಸಂಘಗಳ ಮೂಲಕ ರೂ.3 ಲಕ್ಷದವರೆಗಿನ ಅಲ್ಪಾವಧಿ ಕೃಷಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು ರೂ.10 ಲಕ್ಷದವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು ಶೇ.3 ರ ಬಡ್ಡಿ ದರದಲ್ಲಿ ವಿತರಿಸಲಾಗುತ್ತಿದ್ದು, ವ್ಯತ್ಯಾಸದ ಬಡ್ಡಿ ಸಹಾಯಧನವನ್ನು ಸರ್ಕಾರವೇ ಸಹಕಾರ ಸಂಘಗಳಿಗೆ ಭರಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15.05 ಲಕ್ಷ ರೈತರಿಗೆ ರೂ. 598.32 ಕೋಟಿಗಳ ಬಡ್ಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ 2 ಲಕ್ಷದ 60 ಸಾವಿರದ 122 ರೈತರಿಗೆ ಸಂಬಂಧಿಸಿದಂತೆ ರೂ.70.54 ಕೋಟಿಗಳ ಬಡ್ಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ.
ಸಹಕಾರ ಸಂಘಗಳಲ್ಲಿ ರೈತರು ಸಾಲ ಪಡೆದು ದಿ.15-4-2017 ಕ್ಕೆ ಸುಸ್ತಿಯಾಗಿರುವ ಎಲ್ಲಾ ಬಗೆಯ ಕೃಷಿ ಸಾಲಗಳ ಅಸಲನ್ನು ದಿ.30-06-2017 ರೊಳಗೆ ಪಾವತಿಸಿದಲ್ಲಿ ಸದರಿ ಸಾಲದ ಮೇಲಿನ ಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗಿದ್ದು, 21 ಸಾವಿರದ 110 ರೈತರಿಗೆ ರೂ.46.16 ಕೋಟಿಗಳ ಬಡ್ಡಿ ಮನ್ನಾ ಬಾಬ್ತು ಬಿಡುಗಡೆ ಮಾಡಲಾಗಿದೆ.
2017-18 ನೇ ಸಾಲಿನಲ್ಲಿ ನವೆಂಬರ್ ಅಂತ್ಯದ ವರೆಗೆ 20 ಸಾವಿರದ 529 ಸ್ವಸಹಾಯ ಗುಂಪುಗಳಿಗೆ ರೂ.609 ಕೋಟಿಗಳ ಸಾಲ ವಿತರಿಸಲಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ 663 ಗುಂಪುಗಳಿಗೆ ರೂ.19.01 ಕೋಟಿಗಳ ಸಾಲ ವಿತರಿಸಲಾಗಿದೆ.
2017-18 ನೇ ಸಾಲಿನಿಂದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ ರೂ.5.00 ಲಕ್ಷದವರೆಗಿನ ಸಾಲವನ್ನು ವಿತರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇದುವರೆಗೆ 36,626 ಗುಂಪುಗಳಿಗೆ ರೂ.10.23 ಕೋಟಿಗಳ ಬಡ್ಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ.
ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರನ್ನು ಸಹಕಾರ ಕ್ಷೇತ್ರದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಹಿಂದುಳಿದ ವರ್ಗ/ಅಲ್ಪಸಂಖ್ಯಾತ ವರ್ಗ/ಮಹಿಳೆಯರು/ವಿಕಲಚೇತನರು/ ಬಿಪಿಎಲ್ ವರ್ಗದವರನ್ನು ಸಹಕಾರ ಸಂಘಗಳಲ್ಲಿ ಸದಸ್ಯರನ್ನಾಗಿ ನೋಂದಾಯಿಸಲು ಈ ಸಾಲಿನಲ್ಲಿ 1 ಲಕ್ಷದ 32 ಸಾವಿರದ 311 ಜನರನ್ನು ಸಹಕಾರ ಸಂಘಗಳಲ್ಲಿ ಸದಸ್ಯರನ್ನಾಗಿ ಮಾಡಲು ರೂ.6.00 ಕೋಟಿಗಳನ್ನು ಭರಿಸಲಾಗಿದೆ.
ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ಮಾರುಕಟ್ಟೆ ಮೂಲಭೂತ ಸೌಕರ್ಯ ಸ್ಥಾಪನೆಗಾಗಿ ಸದರಿ ಸಾಲಿನಲ್ಲಿ ರೂ. 1 ಕೋಟಿಗಳÀ ಸಹಾಯಧನವನ್ನು ಮಂಜೂರು ಮಾಡಲಾಗಿದೆ.
ಕರ್ನಾಟಕದಲ್ಲಿ ಬೆಳಗಾವಿ ಜಿಲ್ಲೆಯು ಪ್ರಮುಖ ಜಿಲ್ಲೆಯಾಗಿದ್ದು, ಕೃಷಿ-ಶಿಕ್ಷಣ-ಕೈಗಾರಿಕೆ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.
ಬೆಳಗಾವಿ ಜಿಲ್ಲೆಯಲ್ಲಿ ಬರಪರಿಹಾರ, ಕುಡಿಯುವ ನೀರು ಪೂರೈಕೆ, ಉದ್ಯೋಗ ಖಾತ್ರಿ ಅನುಷ್ಠಾನ, ಜಾನುವಾರುಗಳಿಗೆ ಮೇವು ಪೂರೈಕೆಗೆ ಸರ್ಕಾರ ಆದ್ಯತೆ ನೀಡಿದೆ.
2017ನೇ ಸಾಲಿನ ಹಿಂಗಾರು ಹಂಗಾಮಿನ ಜಿಲ್ಲೆಯಲ್ಲಿ 153.00 ಮಿಮೀ ಸಾಮಾನ್ಯ ಮಳೆ ಪ್ರಮಾಣಕ್ಕೆ ಹೋಲಿಸಲಾಗಿ, ಜಿಲ್ಲೆಯಲ್ಲಿ 120 ಮಿಮೀ ಮಳೆ ದಾಖಲಾಗಿದ್ದು, ಉತ್ತಮ ಬೆಳೆಗಳಾಗಿವೆ.
ಪ್ರಸ್ತುತ ಸಾಲಿನ ಹಿಂಗಾರಿನಲ್ಲಿ 3.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗುವುದಾಗಿ ಅಂದಾಜಿಸಲಾಗಿದ್ದು, ಈವರೆಗೆ 3.30 ಲಕ್ಷ ಹೆಕ್ಟೇರ್, ಅಂದರೆ 98 ಪ್ರತಿಶತ ಪ್ರದೇಶದಲ್ಲಿ ಬಿತ್ತನೆ ಪ್ರಗತಿಯಾಗಿದೆ.
ಹಿಂಗಾರು ಹಂಗಾಮಿನಲ್ಲಿ 0.86 ಲಕ್ಷ ರೈತರಿಗೆ 24 ಸಾವಿರದ 618 ಕ್ವಿಂಟಲ್ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲಾಗಿದೆ.
ಡಿಸೆಂಬರ್ ಅಂತ್ಯದವರೆಗೆ 70 ಸಾವಿರದ 150 ಟನ್ ಪೂರೈಕೆಯಾಗಿದ್ದು, ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ. ಕೃಷಿ ಭಾಗ್ಯ ಯೋಜನೆಯಡಿ 11 ಸಾವಿರದ 472 ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ.
ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಉತ್ತೇಜಿಸಲು ಜಿಲ್ಲೆಯಲ್ಲಿ 2014-15ನೇ ಸಾಲಿನಿಂದ ಇಲ್ಲಿಯವರೆಗೂ ಹಂತ ಹಂತವಾಗಿ 25 ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಿದ್ದು, 49 ಸಾವಿರದ 530 ರೈತರು ಈ ಕೇಂದ್ರಗಳ ಸದುಪಯೋಗ ಪಡೆದುಕೊಂಡಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಂಡ ಕೂಡಲೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಹಸಿವು ಮುಕ್ತ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದಾರೆ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದ ಕೋಟ್ಯಂತರ ಕುಟುಂಬಗಳು ಇದರ ಪ್ರಯೋಜನ ಪಡೆದುಕೊಂಡಿವೆ.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 9 ಲಕ್ಷದ 58 ಸಾವಿರದ 317 ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಲಾಭ ಪಡೆದುಕೊಳ್ಳುತ್ತಿವೆ.
ಕರ್ನಾಟಕವನ್ನು ಪರಿಸರಸ್ನೇಹಿ ರಾಜ್ಯವನ್ನಾಗಿಸಲು ‘ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’ ಜಾರಿಗೆ ತರಲಾಗಿದೆ. ಪ್ರಥಮ ಹಂತದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 1.18 ಲಕ್ಷ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ನೀಡುವ ಕಾರ್ಯ ಪ್ರಗತಿಯಲ್ಲಿರುತ್ತದೆ.
ಸರ್ಕಾರವು ಶೈಕ್ಷಣಿಕ ಗುಣಮಟ್ಟ ಸುಧಾರಣೆ ಮತ್ತು ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಆದ್ಯತೆ ನೀಡಿದ್ದು, ಬಿಸಿಯೂಟ, ಕೆನೆಭರಿತ ಹಾಲು, ಸೈಕಲ್ ವಿತರಣೆ ಮಾಡಲಾಗುತ್ತಿದೆ. ಇದರೊಂದಿಗೆ ಸಮವಸ್ತ್ರ, ಶೂ ಹಾಗೂ ಸಾಕ್ಸ್, ಉಚಿತ ಪಠ್ಯಪುಸ್ತಕ ಹೀಗೆ ಹಲವಾರು ಕ್ರಮಗಳನ್ನು ಕೈಗೊಂಡಿದೆ.
ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ಜಿಲ್ಲೆಯ ಒಟ್ಟು 19 ಸಾವಿರದ 245 ವಿದ್ಯಾರ್ಥಿಗಳಿಗೆ ಉಚಿತವಾಗಿ ಬೈಸಿಕಲ್ ವಿತರಣೆ ಮತ್ತು 1 ರಿಂದ 10ನೇ ತರಗತಿಯವರೆಗಿನ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಲಾಗಿದೆ.
ಜಿಲ್ಲಾ ಪಂಚಾಯ್ತಿ ವತಿಯಿಂದ ಕುಡಿಯುವ ನೀರಿನ ಓಖಆWP ಯೋಜನೆಯಡಿ 2017-18ನೇ ಸಾಲಿಗೆ ಬೆಳಗಾವಿ ಜಿಲ್ಲೆಯಲ್ಲಿ ಭೌತಿಕವಾಗಿ 1979 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ 1 ಸಾವಿರದ 329 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 468 ಕಾಮಗಾರಿಗಳು ಪ್ರಗತಿ ಹಂತದಲ್ಲಿದ್ದು, ಇಲ್ಲಿಯವರೆಗೆ ರೂ.8,820.03 ಲಕ್ಷ ಅನುದಾನವನ್ನು ವೆಚ್ಚ ಮಾಡಲಾಗಿದೆ.
ಬರ ಪರಿಹಾರ ಟಾಸ್ಕಪೋರ್ಸ ಕುಡಿಯುವ ನೀರಿನ ಯೋಜನೆಯಡಿ ಭೌತಿಕವಾಗಿ 409 ಕಾಮಗಾರಿಗಳನ್ನು ಪೂರ್ಣಗೊಳಿಸಿ ರೂ.599.56 ಲಕ್ಷ ವೆಚ್ಚ ಮಾಡಲಾಗಿದೆ.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 30 ಕಾಮಗಾರಿಗಳನ್ನು ಕೈಗೆತ್ತಿಕೊಂಡು ಈ ಪೈಕಿ 17 ಕಾಮಗಾರಿಗಳನ್ನು ಪೂರ್ಣಗೊಳಿಸಿ ರೂ.3206.70 ಲಕ್ಷ ವೆಚ್ಚ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಗೆ ಒಟ್ಟು 1 ಸಾವಿರದ 360 ಶುದ್ದಿಕರಣ ಘಟಕಗಳು ಮಂಜೂರಾಗಿದ್ದು, 1 ಸಾವಿರದ 264 ಶುದ್ಧೀಕರಣ ಘಟಕಗಳನ್ನು ಪೂರ್ಣಗೊಳಿಸಿ ಇಲ್ಲಿಯವರೆಗೆ 7738.32 ಲಕ್ಷ ಅನುದಾನ ಖರ್ಚು ಮಾಡಲಾಗಿದೆ.
ಗ್ರಾಮ ವಿಕಾಸ ಯೋಜನೆಯಡಿ 76 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಸದರಿ ಗ್ರಾಮಗಳಲ್ಲಿ ರಸ್ತೆ, ಅಂಗನವಾಡಿ ಕಟ್ಟಡ, ಸಮುದಾಯ ಭವನ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈವರೆಗೂ ರೂ.2343.54 ಲಕ್ಷ ಅನುದಾನ ವಿನಿಯೋಗಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ 2017-18ನೇ ಸಾಲಿನಲ್ಲಿ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಮರೋಪಾದಿಯಲ್ಲಿ ಕ್ರಮ ಜರುಗಿಸಿ ಇಲ್ಲಿಯವರೆಗೆ 73 ಸಾವಿರದ 570 ಶೌಚಾಲಯಗಳನ್ನು ನಿರ್ಮಿಸಲಾಗಿದೆ.
ಸಾಮಾನ್ಯ ಹಾಗೂ ಅಲ್ಪ ಸಂಖ್ಯಾತ ವರ್ಗದ ಜನಾಂಗಕ್ಕೆ ವಸತಿ ಯೋಜನೆ ಕಲ್ಪಿಸುವ ಕುರಿತು 2017-18ನೇ ಸಾಲಿನಲ್ಲಿ 13 ಸಾವಿರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗದ ಜನಾಂಗಕ್ಕೆ ಎಲ್ಲ ಅರ್ಹ ಫಲಾನುಭವಿಗಳ ಅಯ್ಕೆ ಮಾಡುವ ಉದ್ದೇಶದಿಂದ “ಬೇಡಿಕೆ ಆಧಾರದ ಮೇಲೆ ಮನೆ” ಎಂಬ ಹೊಸ ಪದ್ದತಿ ಜಾರಿಗೆ ತಂದಿದ್ದು 2016-17 ಮತ್ತು 2017-18ನೇ ಸಾಲಿಗೆ ಒಟ್ಟು 17 ಸಾವಿರದ 31 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.
ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಮದುವೆಗಾಗಿ ಸಹಾಯಧನ ನೀಡುವ “ಬಿದಾಯಿ” ಯೋಜನೆ ಹೆಚ್ಚು ಜನಮನ್ನಣೆ ಗಳಿಸಿದೆ. ಈ ಯೋಜನೆಯಡಿ 2017-18ನೇ ಸಾಲಿನಲ್ಲಿ ಮುಸ್ಲಿಂ, ಜೈನ, ಕ್ರಿಶ್ಚಿಯನ್ ಹೀಗೆ ಒಟ್ಟು 1 ಸಾವಿರದ 356 ಫಲಾನುಭವಿಗಳು ಪ್ರಯೋಜನ ಪಡೆದಿದ್ದು, ರೂ.678.00 ಲಕ್ಷಗಳು ವೆಚ್ಚವಾಗಿದೆ.
ಶಾದಿಮಹಲ್/ಸಮುದಾಯ ಭವನಗಳನ್ನು ನಿರ್ಮಾಣ ಯೋಜನೆಯಡಿ 2017-18ನೇ ಸಾಲಿನಲ್ಲಿ ಮುಸ್ಲಿಂ, ಜೈನ, ಕ್ರಿಶ್ಚಿಯನ್ ಸಮುದಾಯದ 17 ಸಂಸ್ಥೆಗಳಿಗೆ ಒಟ್ಟು ರೂ.523.94 ಲಕ್ಷಗಳು ಮಂಜೂರಾಗಿದೆ.
“ವಿದ್ಯಾಸಿರಿ” ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮುಸ್ಲಿಂ, ಜೈನ್, ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ರೂ.88.20 ಲಕ್ಷ ಬಿಡುಗಡೆ ಮಾಡಲಾಗಿದೆ.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2017-18ನೇ ಸಾಲಿನಲ್ಲಿ ಸ್ವಯಂ ಉದ್ಯೋಗ, ಶ್ರಮಶಕ್ತಿ, ಮೈಕ್ರೋ, ಅರಿವು, ಗಂಗಾಕಲ್ಯಾಣ, ಭೂ ಖರೀದಿ ಹೀಗೆ ಐದು ಯೋಜನೆಗಳ ಅನುಷ್ಠಾನಕ್ಕೆ 17.97 ಕೋಟಿ ಆರ್ಥಿಕ ಗುರಿ ನಿಗದಿಪಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮತ್ತು ಸ್ವಯಂ ಉದ್ಯೋಗ ಹೊಂದಲು ಜಿಲ್ಲಾ ಪಂಚಾಯತ ಸಹಕಾರದೊಂದಿಗೆ ಜಿಲ್ಲಾ ವಲಯದಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳಿಂದ ಕೃಷಿ, ತೋಟಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಗಳ ಮೂಲಕ ಸಹಾಯಧನ ಒದಗಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತಿದೆ. 2017-18ನೇ ಸಾಲಿನಲ್ಲಿ ಜಿಲ್ಲಾ ಪಂಚಾಯ್ತಿ ಲೆಕ್ಕ ಶೀರ್ಷಿಕೆಗಳಿಗೆ ಡಿಸೆಂಬರ್ ಅಂತ್ಯದವರೆಗೆ 23 ಕೋಟಿ ಹಾಗೂ ತಾಲ್ಲೂಕು ಪಂಚಾಯತ್ ಲೆಕ್ಕ ಶೀರ್ಷಿಕೆಗಳಿಗೆ ರೂ.21.86 ಕೋಟಿ ವೆಚ್ಚವಾಗಿರುತ್ತದೆ.
ಬೆಳಗಾವಿ ಜಿಲ್ಲೆಯಲ್ಲಿ ಹಿಂದುಳಿದ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಶುಲ್ಕವಿನಾಯಿತಿ, ಶಿಷ್ಯವೇತನ, ಕೌಶಲ್ಯ ತರಬೇತಿ, ನರ್ಸಿಂಗ್ ತರಬೇತಿ ಭತ್ಯೆ, ವಕೀಲರಿಗೆ ತರಬೇತಿ ಭತ್ಯೆ, ವಿದೇಶಿ ವ್ಯಾಸಂಗ ಹೀಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಜಿಲ್ಲಾ ವಲಯದ ಕಾರ್ಯಕ್ರಮಗಳಿಗೆ 59.42 ಕೋಟಿ ಅನುದಾನ ಮತ್ತು ತಾಲ್ಲೂಕು ವಲಯದ ಕಾರ್ಯಕ್ರಮಗಳಿಗೆ 12.20 ಕೋಟಿ ಅನುದಾನ ಒದಗಿಸಲಾಗಿದೆ. ಈಗಾಗಲೇ ಒಟ್ಟು 95 ಸಾವಿರ ಫಲಾನುಭವಿಗಳು ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ 5 ಸಾವಿರದ 294 ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರಿಗೆ ಅನೇಕ ಸೇವಾ ಸೌಲಭ್ಯಗಳ ಜತೆಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ಷೀರಭಾಗ್ಯ ಯೋಜನೆಯಡಿ 4.26 ಲಕ್ಷ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ವಿತರಿಸಲಾಗುತ್ತಿದೆ.
ಅಕ್ಟೋಬರ್ 2, 2017ರಿಂದ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟವನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 37 ಸಾವಿರದ 451 ಗರ್ಭಿಣಿಯರು ಮತ್ತು 36 ಸಾವಿರದ 498 ಬಾಣಂತಿಯರು ಮಾತೃಪೂರ್ಣ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ.
ಕರ್ನಾಟಕ ಸರ್ಕಾರವು ಬೆಳಗಾವಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೆ 24 ಗಂಟೆ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಗೆ 663 ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ಮಂಜೂರಾತಿ ನೀಡಲಾಗಿರುತ್ತದೆ.
ಈ ಯೋಜನೆಯು ಎರಡು ಹಂತಗಳಲ್ಲಿ ಅನುಷ್ಠಾನಗೊಳ್ಳಲಿದ್ದು, ಈ ಯೋಜನೆಗೆ ವಿಶ್ವಬ್ಯಾಂಕ್ 308 ಕೋಟಿ ಹಾಗೂ ಕರ್ನಾಟಕ ಸರ್ಕಾರ 120 ಕೋಟಿ ರೂಪಾಯಿ ಖರ್ಚು ಮಾಡಲಿವೆ.
ಬೆಳಗಾವಿ ಮಹಾನಗರ ಪಾಲಿಕೆಗೆ ವಿಶೇಷವಾಗಿ ಮೂಲಭೂತ ಅಭಿವೃದ್ಧಿಗಾಗಿ ಮಾನ್ಯ ಮುಖ್ಯಮಂತ್ರಿಗಳು 100 ಕೋಟಿ ಹೆಚ್ಚುವರಿ ವಿಶೇಷ ಅನುದಾನ ಒದಗಿಸಿದ್ದು, 85 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಳಗಾವಿ ನಗರದ ವಿವಿಧ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಅನುಮೋದನೆ ನೀಡಲಾಗಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಹತ್ತು ವಾರ್ಡುಗಳಲ್ಲಿ ನಿರಂತರ ನೀರು ಯೋಜನೆ ಜಾರಿಗೊಳಿಸಲಾಗಿದ್ದು, ಉಳಿದ 48 ವಾರ್ಡುಗಳಿಗೆ ನಿರಂತರ ನೀರು ಸರಬರಾಜು ಯೋಜನೆಗೆ ಅನುಮೋದನೆ ನೀಡಲಾಗಿದೆ.
ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಪುರಸ್ಕøತ ಹಾಗೂ ರಾಜ್ಯ ಸರ್ಕಾರದ ಅನುದಾನ ದಡಿಯಲ್ಲಿ ವಿತರಣಾ ವ್ಯವಸ್ಥೆ ಅಭಿವೃದ್ಧಿಪಡಿಸುವ ಯೋಜನೆಯನ್ನು 36.84 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.
ಹುಕ್ಕೇರಿ ಪಟ್ಟಣಕ್ಕೆ ಹಿಡಕಲ್ ಜಲಾಶಯದಿಂದ ನೀರು ಸರಬರಾಜು ಯೋಜನೆಯನ್ನು 26.17 ಕೋಟಿ ವೆಚ್ಚದಲ್ಲಿ ಚಾಲನೆ ನೀಡಲಾಗಿದೆ. ಇದೇ ರೀತಿ ಸಂಕೇಶ್ವರ ಪಟ್ಟಣಕ್ಕೆ ನೀರು ಸರಬರಾಜು ಮಾಡುವ 39.10 ಕೋಟಿ ವೆಚ್ಚದ ಕಾಮಗಾರಿ ಕೂಡ ಪ್ರಗತಿಯಲ್ಲಿದೆ.
ರೇಣುಕಾ ಸಾಗರ ಜಲಾಶಯದಿಂದ ರಾಮದುರ್ಗ ಹಾಗೂ ಮಾರ್ಗ ಮಧ್ಯದ 13 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ 67.58 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ನಗರೋತ್ಥಾನ ಹಂತ-2ರ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆಯ 16 ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಜೂರಾದ 145 ಕಾಮಗಾರಿಗಳಲ್ಲಿ 138 ಪೂರ್ಣಗೊಂಡಿರುತ್ತವೆ. ಇದಕ್ಕಾಗಿ 97.54 ಕೋಟಿ ವೆಚ್ಚ ಮಾಡಲಾಗಿದೆ.
ನಗರೋತ್ಥಾನ ಹಂತ-3ರ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ಪಟ್ಟಣಗಳನ್ನು ಅಭಿವೃದ್ಧಿಪಡಿಸಲು ಬೆಳಗಾವಿ ಜಿಲ್ಲೆಯ 32 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 241.50 ಕೋಟಿ ಅನುದಾನ ಹಂಚಿಕೆಯಾಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನಲ್ಲಿ ಬರುವ 10 ಗ್ರಾಮಗಳ 17 ಕೆರೆಗಳು ಮತ್ತು ಹೆಚ್ಚುವರಿ 22 ಕೆರೆಗಳೂ ಸೇರಿದಂತೆ ಒಟ್ಟು 39 ಕೆರೆಗಳನ್ನು ಕೃಷ್ಣಾ ನದಿಯಿಂದ ನೀರನ್ನೆತ್ತಿ ತುಂಬಿಸುವ ಯೋಜನೆಗೆ ರೂ.91.40 ಕೋಟಿಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಬಾಗ ತಾಲ್ಲೂಕಿನ ಕುಡಚಿ ಮತಕ್ಷೇತ್ರದಲ್ಲಿ ಬರುವ 10 ಗ್ರಾಮಗಳ 19 ಕೆರೆಗಳನ್ನು ಕೃಷ್ಣಾ ನದಿಯಿಂದ ನೀರನ್ನೆತ್ತಿ ತುಂಬಿಸಲು ರೂ.34.38 ಕೋಟಿಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲ್ಲೂಕಿನ ಒಟ್ಟು 22 ಕೆರೆಗಳನ್ನು ಹಿರಣ್ಯಕೇಶಿ ನದಿಯಿಂದ ನೀರನೆತ್ತಿ ತುಂಬಿಸುವ ಕಾಮಗಾರಿಯ ಪರಿಷ್ಕøತ 77.00 ಕೋಟಿ ರೂಪಾಯಿಗಳ ಯೋಜನೆಗೆ ಮಂಜೂರಾತಿ ನೀಡಲಾಗಿದೆ.
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ, ಗಂಗಾಕಲ್ಯಾಣ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.
ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಅಂದಾಜು 381.95 ಕೋಟಿ ವೆಚ್ಚದಲ್ಲಿ 11 ಕೆವಿ ಭೂಮಿ ಒಳಗಿನ ಕೇಬಲ್‍ಗಳನ್ನು ಅಳವಡಿಸುವ ಕೆಲಸ ಪ್ರಗತಿಯಲ್ಲಿದೆ.
ಅಧಿಕೃತಗೊಂಡಿರುವ ಅನಧಿಕೃತ ನೀರಾವರಿ ಪಂಪಸೆಟ್‍ಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 72.35 ಕೋಟಿ ವೆಚ್ಚ ಮಾಡಲಾಗಿದೆ.
ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಜ್ಯೋತಿ ಯೋಜನೆಯನ್ನು 82.86 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ರಾಜ್ಯ ಹೆದ್ದಾರಿ ನವೀಕರಣ ಹಾಗೂ ಸುಧಾರಣೆ ಯೋಜನೆ ಅಡಿಯಲ್ಲಿ 36.29 ಕಿ.ಮೀ. ಉದ್ದ ರಸ್ತೆಯನ್ನು 15.15 ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದು, 2 ಕಾಮಗಾರಿಗಳು ಪೂರ್ತಿಗೊಳಿಸಿ 11.85 ಕಿ.ಮೀ. ಸಾಧನೆ ಮಾಡಲಾಗಿರುತ್ತದೆ.
ಅದೇ ರೀತಿ ಜಿಲ್ಲಾ ಮುಖ್ಯ ರಸ್ತೆಗಳನ್ನು 39.55 ಕೋಟಿ ವೆಚ್ಚದಲ್ಲಿ ನವೀಕರಣ ಹಾಗೂ ಸುಧಾರಣೆಗೆ ಯೋಜಿಸಲಾಗಿದೆ. ಇನ್ನುಳಿದಂತೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ ಒಟ್ಟಾರೆ 30 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಕಾರ್ಯಗತಗೊಳಿಸಲು ಶ್ರಮಿಸುತ್ತಿರುವ ನಮ್ಮ ಸರ್ಕಾರವು ಉತ್ತಮ ಆಡಳಿತ ನೀಡುವ ಮೂಲಕ ನುಡಿದಂತೆ ನಡೆದಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ.
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಪವಿತ್ರ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಾವೆಲ್ಲರೂ ಜಾತಿಭೇದ ಮರೆತು ಕೂಡಿ ಬಾಳಿದಾಗ ಮಾತ್ರ ದೇಶದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಸದೃಢ ಭಾರತ ನಿರ್ಮಾಣ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ನಡೆಯೋಣ.The Republic of India celebrates the constitution of the world: – Minister of State for Ramesh Jarakiholi

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Read Belgaum News & Updates for What’s Happening in Around You @ in News Belgaum Kannada News Portal.