ಗಡಿ ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ವಿಶ್ವವಿದ್ಯಾಲಯ ಪಣ: ಕುಲಸಚಿವ ಪ್ರೊ. ಸಿದ್ದು ಅಲಗೂರ

University of Education for Border Districts Education: Cultural Prof. Sidhu Aligur

ರಾಣಿ ಚನ್ನಮ್ಮ ವಿವಿ ಘಟಿಕೋತ್ಸವಗಡಿ ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ವಿಶ್ವವಿದ್ಯಾಲಯ ಪಣ: ಕುಲಸಚಿವ ಪ್ರೊ. ಸಿದ್ದು ಅಲಗೂರ


ಬೆಳಗಾವಿ: (newsbelgaum )ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ಸಮಾರಂಭ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಬುಧವಾರ (ಜ.31) ಸಂಭ್ರಮದಿಂದ ಜರುಗಿತು.
ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ|| ರಂಗರಾಜ ವನದುರ್ಗ ಅವರು ಮೆರವಣಿಗೆಯ ಮೂಲಕ ಅತಿಥಿಗಳು ಹಾಗೂ ಗಣ್ಯರನ್ನು ವೇದಿಕೆಗೆ ಕರೆತಂದರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ|| ಶಿವಾನಂದ ಹೊಸಮನಿ ಅವರು ಘಟಿಕೋತ್ಸವಕ್ಕೆ ಚಾಲನೆ ನೀಡಿದರು.
ಕುಲಸಚಿವ ಪ್ರೊ|| ಸಿದ್ದು ಅಲಗೂರ ಅವರು ಸ್ವಾಗತ ಭಾಷಣ ಮಾಡಿ, 2010ರಲ್ಲಿ ಪ್ರಾರಂಭವಾದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇಂದು ಹೆಮ್ಮರವಾಗಿ ಬೆಳೆದಿದ್ದು, ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ 354 ಕಾಲೇಜುಗಳಲ್ಲಿ 2 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳು ಕರ್ನಾಟಕದ ಗಡಿ ಜಿಲ್ಲೆಗಳಾಗಿದ್ದು, ಅವುಗಳ ಶೈಕ್ಷಣಿಕ ಅಭಿವೃದ್ಧಿಗೆ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠ, ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠಗಳು ಇವೆ. ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠಗಳು 2017-18ನೇ ಸಾಲಿನಿಂದ ಪ್ರಾರಂಭವಾಗಿವೆ ಎಂದು ತಿಳಿಸಿದರು.
ವಿಶ್ವವಿದ್ಯಾಲಯದಲ್ಲಿರುವ ವಿವಿಧ ಸೌಲಭ್ಯಗಳು, ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಭವಿಷ್ಯತ್ತಿನಲ್ಲಿ ಕೈಗೊಳ್ಳಲಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಕುಲಸಚಿವರು ತಿಳಿಸಿದರು.
ನವದೆಹಲಿಯ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಮಾಜಿ ಅಧ್ಯಕ್ಷರಾದ ಡಾ|| ವಿ.ಎಸ್. ಚವ್ಹಾಣ ಅವರ ಅನುಪಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಪ್ರೊ|| ಆರ್.ಎನ್. ಮನಗೂಳಿ ಅವರು ಘಟಿಕೋತ್ಸವ ಭಾಷಣವನ್ನು ಓದಿದರು.
ಭಾರತ ಪ್ರಪಂಚದಲ್ಲೇ ಅತಿ ಹೆಚ್ಚು ಯುವಜನತೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಜಗತ್ತಿನಾದ್ಯಂತ ಹೆಚ್ಚಾಗುತ್ತಿದ್ದು, ಮೌಲ್ಯಯುತ ಶಿಕ್ಷಣ ನೀಡಲು ಎಲ್ಲ ದೇಶಗಳು ಪ್ರಯತ್ನಿಸುತ್ತಿವೆ. ಉನ್ನತ ಶಿಕ್ಷಣ ಪಡೆಯುವ ಯುವಕರು ಸಮಾಜ ಸೇವೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಮಹಿಳೆಯರು ಇಂದು ಎಲ್ಲ ರಂಗಗಳಲ್ಲಿಯೂ ತೊಡಗಿಸಿಕೊಳ್ಳುತ್ತಿರುವುದು ಸಂತಸದ ವಿಷಯ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ವಿವಿಧ ವೃತ್ತಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಭಾರತ ಪ್ರಪಂಚದಲ್ಲೇ ತನ್ನದೇ ಆದ ಮಹತ್ವವನ್ನು ಹೊಂದಿದ ರಾಷ್ಟ್ರವಾಗಿದ್ದು, ಇಲ್ಲಿನ ಸಂಸ್ಕøತಿ, ಆಚಾರ, ವಿಚಾರ ಜಗತ್ತಿಗೆ ಮಾದರಿಯಾಗಿದೆ ಎಂದರು.
ಇಂದು ಎಲ್ಲ ರಂಗಗಳಲ್ಲಿಯೂ ಸ್ಪರ್ಧೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಬೇಕು ಹಾಗೂ ಕಾಯಕವೇ ಕೈಲಾಸ ಎಂಬ ತತ್ವವನ್ನು ಮರೆಯಬಾರದು ಎಂದು ಸಲಹೆ ನೀಡಿದರು.
ಹಣಕಾಸು ಅಧಿಕಾರಿ ಪರಶುರಾಮ ದುಡಗುಂಟಿ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಧ್ಯಾಪಕರು, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಿಗೆ ಪದವಿ ಪ್ರದಾನ:


ಘಟಿಕೋತ್ಸವದಲ್ಲಿ 8 ಸ್ನಾತಕ ಹಾಗೂ 23 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ವಿವಿಧ ವಿಷಯಗಳಲ್ಲಿ ಅತಿಹೆಚ್ಚು ಅಂಕ ಪಡೆದ 15 ಬಿ.ಎ, 12 ಬಿ.ಕಾಂ, 10 ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ನೀಡಲಾಯಿತು. ಜೊತೆಗೆ 18 ಪಿಎಚ್‍ಡಿ ಪದವಿಗಳನ್ನು ಪ್ರದಾನ ಮಾಡಲಾಯಿತು.

ಶೈಜಲ್‍ಗೆ ನಾಲ್ಕು ಚಿನ್ನದ ಪದಕ:

ನಗರದ ಕೆ.ಎಲ್.ಇ ಸಂಸ್ಥೆಯ ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶೈಲಜ್ ಆರ್. ಪಸಾರಿ ಬಿ.ಕಾಂ ವಿಭಾಗದಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಗಳಿಸುವ ಮೂಲಕ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಕೀರ್ತಿಗೆ ಭಾಜನವಾದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿ ಸದಾಶಿವ ಗಾಣಿಗೇರ 2 ಚಿನ್ನದ ಪದಕಗಳನ್ನು ಪಡೆದು ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದನು.

ಎರಡು ಚಿನ್ನದ ಪದಕ:


ಹಾರೂಗೇರಿಯ ಎಸ್.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಕಾಂತಪ್ಪ ಪಾಟೀಲ, ಉಗಾರ-ಖುರ್ದದ ತುಸ್ವಸೆಟ್ಸ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪೂಜಾ ಮಾಕನ್ನವರ, ಸಾವಳಗಿಯ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಮೇಘಾ ದೋನಾಜ, ಮುದ್ದೇಬಿಹಾಳದ ಎಂ.ಜಿ.ವಿ.ಸಿ ಮಹಾವಿದ್ಯಾಲಯದ ಹೀನಾಕೌಸರ ಜಾನ್ವೇಕರ, ಜಮಖಂಡಿಯ ಬಿಎಲ್‍ಡಿ ಮಹಾವಿದ್ಯಾಲಯದ ರಜತ ರೇವನಕರ, ಚಿಕ್ಕೋಡಿಯ ಬಿ.ಕೆ. ಕಾಲೇಜಿನ ಅಶೋಕ ಲಟ್ಟೆ, ಬೆಳಗಾವಿಯ ಎಸ್‍ಕೆಇಎಸ್ ಜಿ.ಎಸ್. ವಿಜ್ಞಾನ ಮಹಾವಿದ್ಯಾಲಯದ ಶ್ವೇತಾ ಸೋನಾಲ್ಕರ್, ವಿಜಯಪುರದ ಅಂಜುಮನ್ ಮಹಾವಿದ್ಯಾಲಯದ ಅಜರ್ ಸುಮನ್ ಮದ್ರಾಸಿ, ಇಳಕಲ್‍ದ ವಿದ್ಯಾರ್ಥಿ ಮೊನಾಲ್ ಭಂಡಾರಿ ಅವರು ಎರಡು ಚಿನ್ನದ ಪದಕಗಳನ್ನು ಪಡೆದು ಸಂಭ್ರಮಿಸಿದರು. university-education-border-districts-education-cultural-prof-sidhu-aligur

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Read Belgaum News & Updates for What’s Happening in Around You @ in News Belgaum Kannada News Portal.