ಸಂತ ಸೇವಾಲಾಲ-ಛತ್ರಪತಿ ಶಿವಾಜಿ-ಕವಿ ಸರ್ವಜ್ಞ ಜಯಂತಿ ಪೂರ್ವಭಾವಿ ಸಭೆ

Sant Sevalala - Chhatrapati Shivaji-poet Sarvajna Jayanti Pre-Assembly Meeting

ಬೆಳಗಾವಿ:( news belgaum) ಸಂತ ಶ್ರೀ ಸೇವಾಲಾಲ, ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸಂತ ಕವಿ ಸರ್ವಜ್ಞ ಜಯಂತಿಗಳನ್ನು ಜಿಲ್ಲಾಡಳಿತದ ವತಿಯಿಂದ ಅದ್ಧೂರಿಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಫೆ.9) ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

  • ಸಂತ ಶ್ರೀ ಸೇವಾಲಾಲ ಜಯಂತಿ ಕಾರ್ಯಕ್ರಮ ಫೆಬ್ರವರಿ 15 ರಂದು ನಡೆಯಲಿದ್ದು,

ಬೆಳಿಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 9:30 ಗಂಟೆಗೆ ಕೋಟೆ ಕೆರೆಯಿಂದ ಚನ್ನಮ್ಮ ವೃತ್ತ ಮಾರ್ಗವಾಗಿ ಕುಮಾರ ಗಂಧರ್ವ ರಂಗ ಮಂದಿರದವರೆಗೆ ಶ್ರೀ ಸೇವಾಲಾಲ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಫೆಬ್ರವರಿ 19 ರಂದು ಜರುಗುವುದು. ಬೆಳಿಗ್ಗೆ 9:30ಕ್ಕೆ ಶಿವಾಜಿ ಉದ್ಯಾನದಿಂದ ನಾಥ ಪೈ ವೃತ್ತದವರೆಗೆ ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರದ ಭವ್ಯ ಮೆರವÀಣಿಗೆಯನ್ನು ಏರ್ಪಡಿಸಲಾಗಿದೆ. ನಂತರ ಸಂಜೆ 5:30 ಗಂಟೆಗೆ ಸ್ಥಳೀಯ ಶಿವಾಜಿ ಉದ್ಯಾನದಲ್ಲಿ ವೇದಿಕೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಜರಗುವವು ಎಂದು ಹೇಳಿದರು.
ಸಂತ ಕವಿ ಸರ್ವಜ್ಞನರ ಜಯಂತಿಯನ್ನು ಫೆಬ್ರವರಿ 20 ರಂದು ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂಜಾನೆ 9:30 ಗಂಟೆಗೆ ಕೋಟೆ ಕೆರೆಯಿಂದ ಚನ್ನಮ್ಮ ವೃತ್ತದ ಮೂಲಕ ಕುಮಾರ ಗಂಧರ್ವದ ವರೆಗೆ ಸಂತ ಕವಿ ಸರ್ವಜ್ಞನರ ಭಾವ ಚಿತ್ರವುಳ್ಳ ಭವ್ಯ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಫೆಬ್ರವರಿ 13 ರಂದು ಜರುಗಬೇಕಿದ್ದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿ ದಲಿತ ವಚನಕಾರರ ಜಯಂತಿಯನ್ನು ದಲಿತ ಸಮಾಜದ ಮುಖಂಡರ ಒತ್ತಾಯದ ಮೇರೆಗೆ ಮುಂದೂಡಲಾಗಿದೆ. ದಲಿತ ಮುಖಂಡರು ಸೂಚಿಸಿದ ದಿನಾಂಕದಂದು ದಲಿತ ವಚನಕಾರರ ಜಯಂತಿಯನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರದಿಂದ ಒಟ್ಟು 29 ಜಯಂತಿಗಳನ್ನು ಆಚರಿಸಲಾಗುತ್ತಿದೆ. ಅದರಂತೆ ಸಂತ ಶ್ರೀ ಸೇವಾಲಾಲ, ಛತ್ರಪತಿ ಶಿವಾಜಿ ಮಹಾರಾಜ, ಸಂತ ಕವಿ ಸರ್ವಜ್ಞನ ಹಾಗೂ ದಲಿತ ವಚನಕಾರ ಜಯಂತಿಯನ್ನು ಅದ್ಧೂರಿಯಾಗಿ ಮತ್ತು ಸುವ್ಯವಸ್ಥಿತವಾಗಿ ಆಚರಿಸಲಾಗುವುದು. ಜಯಂತಿಗಳು ಯಶಸ್ವಿಗೊಳ್ಳಬೇಕಾದರೆ ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಿಮ್ಮ ಸಮಾಜದವರೊಟ್ಟಿಗೆ ಇತರ ಸಮಾಜದ ಮುಖಂಡರನ್ನು ಜಯಂತಿಗೆ ಆಹ್ವಾನಿಸಿ ಜಯಂತಿಯನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಶೈಲ ಕರಿಶಂಕರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಹಾಗೂ ಸದಸ್ಯರು ಸಭೆಯಲ್ಲಿ ಹಾಜರಿದ್ದರು.Sant Sevalala – Chhatrapati Shivaji-poet Sarvajna Jayanti Pre-Assembly Meeting

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Read Belgaum News & Updates for What’s Happening in Around You @ in News Belgaum Kannada News Portal.